ದುರ್ಘಟನೆಯಲ್ಲಿ ಇಬ್ಬರು ಗಂಭೀರ, ಆಸ್ಪತ್ರೆಗೆ ದಾಖಲು
ಟ್ರಕ್-ಕ್ರೂಸರ್ ವಾಹನದ ನಡುವೆ ಅಪಘಾತ ಸಂಭವಿಸಿದೆ
ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ದುರ್ಘನೆ
ಚಿಕ್ಕೋಡಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಬರುವಾಗ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಅಥಣಿ ತಾಲೂಕಿನ ಬಡಚಿ ಮೂಲದ ಐವರು ಸಾವನ್ನಪ್ಪಿದ್ದಾರೆ. ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದ ಆಜೂರ (32), ಹನುಮಂತ ಆಜೂರ (42), ಚಾಲಕ ಹನುಮಂತ ಜಾದವ್ (32) ಎಂದು ಗುರುತಿಸಲಾಗಿದೆ.
ದುರ್ಘಟನೆಯಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ನಾಲ್ಕೈದು ದಿನದ ಹಿಂದೆ ಕುಟುಂಬಸ್ಥರೆಲ್ಲ ಹೊರಟಿದ್ದರು ಎನ್ನಲಾಗಿದೆ. ಟ್ರಕ್ ಹಾಗೂ ಕ್ರೂಸರ್ ವಾಹನದ ನಡುವೆ ಅಪಘಾತ ಸಂಭವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ