newsfirstkannada.com

Share :

Published June 2, 2023 at 5:21pm

    ಭೀಕರ ಸರಣಿ ರೈಲು ಅಪಘಾತ

    50 ಮಂದಿ ಪ್ರಯಾಣಿಕರು ದಾರುಣ ಸಾವು

    ಅಪಘಾತದಕ್ಕೆ ಪ್ರಧಾನಿ ಮೋದಿ ಸಂತಾಪ

ಭುವನೇಶ್ವರ್​: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಕೋರಮಂಡಲ್​ ಎಕ್ಸ್​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದೆ. ಮೂರು ರೈಲುಗಳ ಅಪಘಾತ ಸಂಭವಿಸಿದ್ದು, ಜೀವ ಭಯದಲ್ಲೇ 50 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು, 350 ಮಂದಿ ತೀವ್ರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಎರಡು ಪ್ಯಾಸೇಂಜರ್​ ಟ್ರೈನ್​, ಒಂದು ಗೂಡ್ಸ್​ ರೈಲು ನಡುವೆ ಅಪಘಾತ ಆಗಿದೆ. ಈಗ ಅಪಘಾತಕ್ಕೀಡಾದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಜತೆಗೆ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ರೈಲ್ವೆ ಖಾತೆ ಸಚಿವ ಅಶ್ಬಿನಿ ವೈಷ್ಣವ್​ ಜತೆ ಮಾತನಾಡಿರುವುದಾಗಿ ಮೋದಿ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More