newsfirstkannada.com

ಉರ್ದು ಕವಿ ಗುಲ್ಜಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಜ್ಞಾನಪೀಠ ಪ್ರಶಸ್ತಿ ಘೋಷಣೆ

Share :

Published February 17, 2024 at 7:51pm

Update February 17, 2024 at 7:52pm

    ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯಿಂದ ಇಬ್ಬರ ಹೆಸರು ಘೋಷಣೆ

    ಅಂಧರಾಗಿದ್ದರು 100ಕ್ಕೂ ಹೆಚ್ಚು ಪುಸ್ತಕಗಳನ್ನ ಬರೆದ ರಾಮಭದ್ರಾಚಾರ್ಯರು

    ಐದು ರಾಷ್ಟ್ರೀಯ ಚಲನಚಿತ್ರಗಳಲ್ಲಿ ಪ್ರಶಸ್ತಿಗಳನ್ನು ಪಡೆದ ಉರ್ದು ಕವಿ ಗುಲ್ಜಾರ್

ನವದೆಹಲಿ: ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ 2023ರ ಜ್ಞಾನಪೀಠ ಪ್ರಶಸ್ತಿ ಘೋಷಿಸಲಾಗಿದೆ. ಉರ್ದು ಕವಿ ಗುಲ್ಜಾರ್ ಅವರು ಹಿಂದಿ ಸಿನಿಮಾ ಮತ್ತು ಕಾವ್ಯಕ್ಕೆ ನೀಡಿದ ಕೊಡುಗೆಗಳಿಗಾಗಿ ಈ ಗೌರವಕ್ಕೆ ಭಾಜನರಾಗಿದ್ದಾರೆ.

ರಾಮಭದ್ರಾಚಾರ್ಯರು ಅಂಧರಾಗಿದ್ದರೂ ಸಹ ಆಳವಾದ ಸಂಸ್ಕೃತ ವಿದ್ವಾಂಸರಾಗಿದ್ದಾರೆ. ಆಯ್ಕೆ ಸಮಿತಿಯು ಆಯಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಕೆಲಸವನ್ನು ಗುರುತಿಸಿ ಕವಿ ಗುಲ್ಜಾರ್ ಹಾಗೂ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಘೋಷಿಸಲಾಗಿದೆ.

ಕವಿ ಗುಲ್ಟಾರ್ ಅವರಿಗೆ ಈ ಹಿಂದೆ ಸಾಹಿತ್ಯ ಅಕಾಡೆಮಿ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರ ಕೆಲಸಕ್ಕಾಗಿ ಮೆಚ್ಚುಗೆ ಪಡೆದಿದ್ದಾರೆ. ಅವರು ಈ ಹಿಂದೆ 2002ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು 2004ರಲ್ಲಿ ಪದ್ಮಭೂಷಣ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಅಲ್ಲದೆ ಹಿಂದಿ ಚಿತ್ರರಂಗದಲ್ಲಿನ ವಿವಿಧ ಕೆಲಸಗಳಿಗಾಗಿ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇದನ್ನು ಓದಿ: ಬ್ಯಾಂಕ್​​ ಡೀಟೆಲ್ಸ್​​ ಅಪ್ಡೇಟ್​​ ಮಾಡಿ ಎಂದು ಕಾಲ್ ಬರ್ತಿದ್ಯಾ? ಮೋಸ ಹೋಗೋ ಮುನ್ನ ಸ್ಟೋರಿ ಓದಿ!

ಮಧ್ಯಪ್ರದೇಶದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕರೂ ಹಾಗೂ ಮುಖ್ಯಸ್ಥರಾದ ಜಗದ್ಗುರು ರಾಮಭದ್ರಾಚಾರ್ಯರು ಹೆಸರಾಂತ ಸಂಸ್ಕೃತ ವಿದ್ವಾಂಸರಾಗಿದ್ದಾರೆ. ಹಿಂದೂ ಆಧ್ಯಾತ್ಮಿಕ ನಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಅಂಧರಾಗಿದ್ದರೂ 100ಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಇವರು ಕೂಡ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಉರ್ದು ಕವಿ ಗುಲ್ಜಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಜ್ಞಾನಪೀಠ ಪ್ರಶಸ್ತಿ ಘೋಷಣೆ

https://newsfirstlive.com/wp-content/uploads/2024/02/Jnanpith-Award.jpg

Load More