newsfirstkannada.com

5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಮತ್ತೆ ನಡೆಯುತ್ತಾ? ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Share :

Published March 18, 2024 at 8:20pm

Update March 18, 2024 at 8:14pm

  ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

  ರಾಜ್ಯದಲ್ಲಿ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಮತ್ತೆ ನಡೆಯುತ್ತಾ?

  ರಾಜ್ಯ ಸರ್ಕಾರದ ವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದ ಆಲಿಸಿರೋ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಮುಂದಿನ ಕೆಲ ದಿನಗಳಲ್ಲಿ ಈ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ನೀಡಲಿದೆ.

ಇದನ್ನು ಓದಿ: ಕಾವೇರಿ ಮಡಿಲಲ್ಲಿ ಮೊದಲ ವರ್ಷಧಾರೆ.. ಮಳೆರಾಯನ ಸಿಂಚನಕ್ಕೆ ಕೊಡಗು ಕೂಲ್, ಕೂಲ್‌

5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು.

ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್‌ ಬೋರ್ಡ್‌ ಪರೀಕ್ಷೆ ನಡೆಸದಂತೆ ತಡೆ ನೀಡಿತ್ತು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 5, 8, 9 ಹಾಗೂ 11 ನೇ ತರಗತಿಗಳಿಗೆ ಆರಂಭವಾಗಿದ್ದ ಪರೀಕ್ಷೆಯಲ್ಲಿ ಪರೀಕ್ಷಾ ಮಂಡಳಿ ಮುಂದೂಡಿದೆ. ಈ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ವಾದ ಆಲಿಸಿದ ನ್ಯಾ. ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ.ರೈ ಅವರ ನ್ಯಾಯಪೀಠ ಈ ತೀರ್ಪು ಕಾಯ್ದಿರಿಸಿದೆ. ವಿಚಾರಣೆ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಮಹತ್ವದ ತೀರ್ಪು ಪ್ರಕಟ ಆಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಮತ್ತೆ ನಡೆಯುತ್ತಾ? ತೀರ್ಪು ಕಾಯ್ದಿರಿಸಿದ ಹೈಕೋರ್ಟ್

https://newsfirstlive.com/wp-content/uploads/2023/07/CET_EXAM.jpg

Load More