ಕಾಲ್ತುಳಿತದಲ್ಲಿ 40ಕ್ಕೂ ಹೆಚ್ಚು ಭಕ್ತರು ಗಂಭೀರ.. ನಾಲ್ವರ ಸ್ಥಿತಿ ಚಿಂತಾಜನಕ, ಸದ್ಯ ತಿರುಪತಿಯಲ್ಲಿ ಏನಾಗುತ್ತಿದೆ?

author-image
Bheemappa
Updated On
ಕಾಲ್ತುಳಿತದಲ್ಲಿ 40ಕ್ಕೂ ಹೆಚ್ಚು ಭಕ್ತರು ಗಂಭೀರ.. ನಾಲ್ವರ ಸ್ಥಿತಿ ಚಿಂತಾಜನಕ, ಸದ್ಯ ತಿರುಪತಿಯಲ್ಲಿ ಏನಾಗುತ್ತಿದೆ?
Advertisment
  • ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
  • ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ರೆ ಏರ್​ಲಿಫ್ಟ್​ ಮಾಡಲು ಸೂಚನೆ
  • ಘಟನೆ ಸಂಬಂಧ ಸ್ಥಳಕ್ಕೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ

ಹೈದರಾಬಾದ್: ತಿರುಪತಿಯ ವೈಕುಂಠ ದ್ವಾರದ ದರ್ಶನದ ಟೋಕನ್ ಪಡೆಯುವ ವೇಳೆ ಕಾಲ್ತುಳಿತ ಸಂಭವಿಸಿ 6 ಭಕ್ತರು ಕೊನೆಯುಸಿರುಳೆದಿದ್ದಾರೆ. ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕವಿದ್ದಲ್ಲಿ ಏರ್​​ಲಿಫ್ಟ್​ ಮಾಡುವಂತೆ ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಬುದ್ಧೇಟಿ ನಾಯುಡುಬಾಬು (51), ವಿಶಾಖಪಟ್ಟಣಂನ ರಜನಿ (47), ಲಾವಣ್ಯ (40), ಶಾಂತಿ (34), ಕರ್ನಾಟಕದ ಬಳ್ಳಾರಿಗೆ ಸೇರಿದ ನಿರ್ಮಲ (50) ಹಾಗೂ ಓರ್ವ ಪುರುಷರೊಬ್ಬರು ಕಾಲ್ತುಳಿದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನುಳಿದತೆ 40ಕ್ಕೂ ಹೆಚ್ಚು ಜನರು ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಭಕ್ತರು ಪ್ರಾಣ ಕೊಳೆದುಕೊಂಡಿದ್ದು ಹಲವಾರು ಭಕ್ತರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಘಟನೆ ನಡೆದ ಕೌಂಟರ್​ನಲ್ಲಿ ಟೋಕನ್ ಕೊಡುವುದನ್ನು ನಿಲ್ಲಿಸಲಾಗಿದೆ. ಆದರೆ ಉಳಿದ ಕೌಂಟರ್​ಗಳಲ್ಲಿ ಇಂದು ಬೆಳಗ್ಗೆಯಿಂದ ಟೋಕನ್ ವಿತರಣೆ ಮಾಡಲಾಗುತ್ತಿದೆ. ವೈಕುಂಠ ಏಕಾದಶಿಗೆ ಟಿಕೆಟ್​ಗಳನ್ನು ಭಕ್ತರಿಗೆ ನೀಡಲಾಗುತ್ತಿದೆ.

publive-image

ಇದನ್ನೂ ಓದಿ:ಗೋವಿಂದನ 7 ಭಕ್ತರು ಕೊನೆಯುಸಿರು.. ಕಾಲ್ತುಳಿತಕ್ಕೆ ಅಸಲಿ ಕಾರಣ ಏನು?

ಇನ್ನು ರುಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರವವರ ಪೈಕಿ ನಾಲ್ವರು ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದರೇ ಅವರನ್ನು ಏರ್​ಲಿಫ್ಟ್​ ಮೂಲಕ ಹೈದರಾಬಾದ್​ನ ಆಸ್ಪತ್ರೆಗೆ ಸ್ಥಳಾಂತರ ಮಾಡುವಂತೆ ಸಿಎಂ ಚಂದ್ರಬಾಬು ನಾಯ್ಡು ಸೂಚನೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಇಂದು ತಿರುಪತಿಗೆ ಸಿಎಂ ಕೂಡ ಭೇಟಿ ನೀಡಿ ಘಟನೆ ಕುರಿತು ಪೂರ್ಣ ಮಾಹಿತಿ ಪಡೆಯಲಿದ್ದಾರೆ.

ಈ ಘಟನೆಯಿಂದ ಸಿಎಂ ಚಂದ್ರಬಾಬು ನಾಯ್ಡು ಅವರು ಆತಂಕ ವ್ಯಕ್ತಪಡಿಸಿದ್ದು, ಉನ್ನತ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಎಲ್ಲವನ್ನು ನಿಯಂತ್ರಣದಲ್ಲಿ ತೆಗೆದುಕೊಳ್ಳಬೇಕು. ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ಕೊಡುವಂತೆ ವೈದ್ಯರಿಗೆ ಹೇಳಿದ್ದಾರೆ. ಇನ್ನುಳಿದ ಪ್ರದೇಶಗಳಲ್ಲಿ ಇಂತಹ ಘಟನೆ ನಡೆಯದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಇನ್ನು ದೇವಾಲಯದ ಆಡಳಿತ ಮಂಡಳಿ ಅಲ್ಲಿನ ಪರಿಸ್ಥಿತಿ ಕುರಿತು ಎಲ್ಲ ಮಾಹಿತಿ ತಮಗೆ ತಿಳಿಸುತ್ತಿರಬೇಕು ಎಂದು ಸಿಎಂ ಅವರು ಆದೇಶ ಮಾಡಿದ್ದಾರೆ ಎನ್ನಲಾಗಿದೆ.

​ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment