ಇನ್ನೋವಾ ಕಾರು, ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಉಸಿರು ನಿಲ್ಲಿಸಿದ 6 ಮಂದಿ

author-image
Veena Gangani
Updated On
ಇನ್ನೋವಾ ಕಾರು, ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಉಸಿರು ನಿಲ್ಲಿಸಿದ 6 ಮಂದಿ
Advertisment
  • ಅಪಘಾತದಲ್ಲಿ ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ
  • ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಕಾರು
  • 8 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇನ್ನೋವಾ

ಅಮರಾವತಿ: ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ಅದರಲ್ಲಿ ಒಬ್ಬರಿಗೆ ಗಂಭೀರವಾಗಿ ಗಾಯಗೊಂಡಿರೋ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಮರೋಲು ಮಂಡಲದ ತತಿಚೆರ್ಲಮೋಟು ಬಳಿ ನಡೆದಿದೆ.

ಇದನ್ನೂ ಓದಿ: ತಂದೆಯ ‘ಸುಪಾರಿ’ ಆರೋಪಕ್ಕೆ ಸಖತ್ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ.. ಏನಂದ್ರು?

publive-image

ಮಹಾನಂದಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ 8 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇನ್ನೋವಾ ಕಾರು ಅತಿವೇಗದಲ್ಲಿ ಬಂದು ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

publive-image

ವಿಷಯ ತಿಳಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ನಜ್ಜುಗುಜ್ಜಾದ ವಾಹನದೊಳಗೆ ಸಿಲುಕಿದ್ದ ಶವಗಳನ್ನ ಹೊರತೆಗೆದಿದ್ದಾರೆ. ಮೃತರನ್ನು ಭವಾನಿ, ನರಸಿಂಹನ್, ಬಬ್ಲು, ದಿವಾಕರ್, ಸನ್ನಿ ಮತ್ತು ಅಮ್ಕಾಲು ಎಂದು ಪೊಲೀಸರು ಗುರುತಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment