Advertisment

ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಪುಟಾಣಿ ಅವಂತಿಕಾಳ ಮೃತದೇಹ ಪತ್ತೆ..

author-image
Ganesh
Updated On
ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಪುಟಾಣಿ ಅವಂತಿಕಾಳ ಮೃತದೇಹ ಪತ್ತೆ..
Advertisment
  • ಜುಲೈ 16 ರಂದು ಶಿರೂರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣ
  • ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಬಾಲಕಿಯ ಶವ ಪತ್ತೆ
  • ಗುಡ್ಡ ಕುಸಿದ ಸ್ಥಳದಲ್ಲೇ ಲಾರಿ ಒಂದು ಸಿಲುಕಿರುವ ಶಂಕೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಅವಂತಿಕಾಳ (6)ಮೃತದೇಹ ಪತ್ತೆಯಾಗಿದೆ.
ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು ಕಣ್ಮರೆಯಾಗಿದ್ದರು. ಐವರ ಪೈಕಿ ಮೂವರ ಮೃತದೇಹ ಪತ್ತೆಯಾಗಿತ್ತು. ಲಕ್ಷ್ಮಣ ನಾಯ್ಕ, ಪತ್ನಿ ಶಾಂತಿ ನಾಯ್ಕ, ಮಗ ರೋಶನ್ ನಾಯ್ಕ ಮೃತದೇಹ ಪತ್ತೆಯಾಗಿತ್ತು. ಇದೀಗ ಬಾಲಕಿ ಅವಂತಿಕಾ ಮೃತದೇಹ ಕೂಡ ಪತ್ತೆಯಾಗಿದೆ.

Advertisment

ಕುಮಟಾ ತಾಲೂಕಿನ ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಮೃತದೇಹವನ್ನು ಗೋಕರ್ಣದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಇದೇ ದುರಂತದಲ್ಲಿ ಒಟ್ಟು 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ:ಅನಂತ್ ಅಂಬಾನಿ ಮದುವೆಯ ಸ್ಪೆಷಲ್ ಸಿನಿಮಾ ರೆಡಿ.. ಅಮಿತಾಬ್ ಬಚ್ಚನ್ ಪಾತ್ರವೇನು..?

publive-image

ಮತ್ತೊಂದು ಕಡೆ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಚರಣೆ ವೇಳೆ ಲಾರಿ ಒಂದರ ಜಿಪಿಎಸ್ ಲೋಕೇಷನ್ ಪತ್ತೆಯಾಗಿದೆ. ಜೋಯಿಡಾ ರಾಮನಗರದ ಜಗಳಪೆಟ್​ದಿಂದ ಕಟ್ಟಿಗೆ ತುಂಬಿದ್ದ 12 ಚಕ್ರದ ಲಾರಿ ಕೇರಳಕ್ಕೆ ಪ್ರಯಾಣಿಸುತ್ತಿತ್ತು. ಶಿರೂರು ಲಕ್ಷ್ಮಣ ನಾಯ್ಕ್​ರ ಹೋಟೆಲ್​ನಲ್ಲಿ ಖಾಯಂ ಟೀ ಕುಡಿಯುತ್ತಿದ್ದ ಲಾರಿ ಚಾಲಕ ಅರ್ಜುನ್, ಮಂಗಳವಾರ ಬೆಳಗ್ಗೆ 4 ಗಂಟೆಗೆ ಗುಡ್ಡ ಕುಸಿತದ ಸ್ಥಳದಲ್ಲಿಯೇ ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ.

Advertisment

ಲಾರಿ ಸಮೇತ ಅರ್ಜುನ್ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ವಿಷಯ ತಿಳಿದು ಅರ್ಜುನ್ ಕುಟುಂಬಸ್ಥರು ಕೂಡ ಸ್ಥಳಕ್ಕಾಗಮಿಸಿದ್ದಾರೆ. ತ್ವರಿತ ಕಾರ್ಯಾಚರಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ಅರ್ಜುನ್ ಸಹೋದರ ಅಭಿಜಿತ್ ಮನವಿ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment