ಇಡೀ ವಿಶ್ವವನ್ನೇ ಬೆರಗುಗೊಳಿಸಿದ ಬ್ಯೂಟಿ ಕ್ವೀನ್; ಈಕೆ ವಯಸ್ಸು ಎಷ್ಟು ಅಂತ ಕೇಳಿದ್ರೆ ಶಾಕ್ ಆಗ್ತೀರಾ!

author-image
Veena Gangani
Updated On
ಇಡೀ ವಿಶ್ವವನ್ನೇ ಬೆರಗುಗೊಳಿಸಿದ ಬ್ಯೂಟಿ ಕ್ವೀನ್; ಈಕೆ ವಯಸ್ಸು ಎಷ್ಟು ಅಂತ ಕೇಳಿದ್ರೆ ಶಾಕ್ ಆಗ್ತೀರಾ!
Advertisment
  • ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ ‘ಅಲೆಜಾಂಡ್ರಾ ಮಾರಿಸಾ ರೊಡ್ರಿಗಸ್’
  • ಮಿಸ್ ಯುನಿವರ್ಸ್ ಬ್ಯೂನಸ್ ಐರಿಸ್ ಕಿರೀಟ ಮುಡಿಗೇರಿಸಿಕೊಂಡ ಪತ್ರಕರ್ತೆ
  • ಇಂತಹ ವಯಸ್ಸಿನಲ್ಲಿಯೂ ಈಕೆ ಸೌಂದರ್ಯದ ಬಗ್ಗೆ ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

ಅರ್ಜೆಂಟೀನಾ: ಸಾಮಾನ್ಯವಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುವುದನ್ನು ನಾವೆಲ್ಲಾ ನೋಡಿರುತ್ತೇವೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಬ್ಯೂನಸ್ ಐರಿಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ ಎಂದರೆ ನಂಬಲು ಸಾಧ್ಯವೆ? ಹೌದು, ಇದು ನಂಬಲು ಅಸಾಧ್ಯ ಎನಿಸಿದರೂ ಸತ್ಯ.

publive-image

ಇದನ್ನೂ ಓದಿ:VIDEO: ದುಬಾರಿ ಕಾರು ಖರೀದಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿ; ಬೆಲೆ ಎಷ್ಟು ಗೊತ್ತಾ?

ತನ್ನ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಹೌದು, ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಕೂಡ ಪಡೆದುಕೊಂಡಿದ್ದಾರೆ.

publive-image

ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಲೆಜಾಂಡ್ರಾ ಮಾರಿಸಾ ರೊಡ್ರಿಗಸ್ ಅವರ ಬಗ್ಗೆ ಸಾಕಷ್ಟು ಮಾತುಕತೆ ನಡೆಯುತ್ತಿದೆ. ಈ ಮೂಲಕ ನೆಟ್ಟಿಗರ ಗಮನವನ್ನು ತನ್ನತ್ತ ಸೆಳೆದಿದ್ದಾರೆ ಈ ಅಲೆಜಾಂಡ್ರಾ ಮಾರಿಸಾ ರೊಡ್ರಿಗಸ್.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment