newsfirstkannada.com

ಮುಂದಿನ 7 ದಿನ ರಾಜ್ಯದಲ್ಲಿ ವರುಣನ ಆರ್ಭಟ; ಭಾರೀ ಮಳೆಯ ಎಚ್ಚರಿಕೆ; ಎಲ್ಲೆಲ್ಲಿ?

Share :

Published June 20, 2024 at 5:22pm

  ಇಂದು ಸಂಜೆ ಸಿಲಿಕಾನ್​ ಸಿಟಿಯಲ್ಲಿ ಜೋರಾಗಲಿರೋ ಮಳೆರಾಯ

  ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

  ರಾಜ್ಯದ ಜನತೆಗೆ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಜೋರಾದ ಗಾಳಿ ಸಹಿತ ಮಳೆಯಾಗಲಿದೆ ಅಂತ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ದರ್ಶನ್‌ ಗ್ಯಾಂಗ್ ವಿರುದ್ಧ 8 ಹೊಸ ಸೆಕ್ಷನ್‌ ಸೇರಿಸಿದ ಪೊಲೀಸರು.. ಯಾವ್ಯಾವ ಸೆಕ್ಷನ್‌ಗೆ ಎಷ್ಟು ವರ್ಷ ಶಿಕ್ಷೆ?

ಇಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ (30-40 kmph) ಧಾರಾಕಾರ ಮಳೆ ಬೀಳಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ.

21 ರಿಂದ 28ರ ತನಕ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್​ ಸಿಟಿಯಲ್ಲಿ ಮಳೆರಾಯನ ಅಬ್ಬರ ಜೋರಾಗಲಿದೆ. ಹೀಗಾಗಿ ಮನೆಯಿಂದ ಆಚೆ ಬರುವ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ರೈನ್ ಕೋಟ್ ಹಾಗೂ ಕೊಡೆಗಳನ್ನು ಜೊತೆಗೆ ಇಟ್ಟುಕೊಂಡಿದ್ದರೆ ಉತ್ತಮ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಂದಿನ 7 ದಿನ ರಾಜ್ಯದಲ್ಲಿ ವರುಣನ ಆರ್ಭಟ; ಭಾರೀ ಮಳೆಯ ಎಚ್ಚರಿಕೆ; ಎಲ್ಲೆಲ್ಲಿ?

https://newsfirstlive.com/wp-content/uploads/2023/12/BNG_RAIN-5.jpg

Load More