Advertisment

BREAKING: ದರ್ಶನ್​ಗೆ ಆತಿಥ್ಯ ನೀಡಿದ್ದಕ್ಕೆ 7 ಅಧಿಕಾರಿಗಳು ಅಮಾನತು

author-image
Veena Gangani
Updated On
BREAKING: ದರ್ಶನ್​ಗೆ ಆತಿಥ್ಯ ನೀಡಿದ್ದಕ್ಕೆ 7 ಅಧಿಕಾರಿಗಳು ಅಮಾನತು
Advertisment
  • ವಿಡಿಯೋ ಕಾಲ್​ನಲ್ಲಿ ಪುಡಿ ರೌಡಿ ಜೊತೆಗೆ ನಟ ಮಾತುಕತೆ
  • ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ ನಟ ದರ್ಶನ್‌
  • ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರೂ ಅವರ ಮೇಲೂ ಕ್ರಮ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದೊಂದಿಗೆ ಸಿಗರೇಟು, ಟೀ ಕುಡಿಯುತ್ತಿರುವ ಫೋಟೋ ವೈರಲ್ ಆಗಿದೆ. ಮಾಧ್ಯಮಗಳು ನಟನ ಪೋಟೋವನ್ನು ಬಿತ್ತರಿಸಿವೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ  7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಖುದ್ದು ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಹೇಳಿದ್ದಾರೆ.

Advertisment

ಇದನ್ನೂ ಓದಿ: ಚೆನ್ನಾಗಿದ್ದೀರಾ ಬಾಸ್.. ಹೂ ಚಿನ್ನ; ದರ್ಶನ್ ಬಿಂದಾಸ್ ಲೈಫ್‌ಗೆ ಹೊಸ ಟ್ವಿಸ್ಟ್‌; ವಿಡಿಯೋ ಕಾಲ್ ಮಾಡಿದ್ಯಾರು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ ಜೈಲು ಸೇರಿದ್ದಾರೆ. ಕಳೆದ ಮೂರು ತಿಂಗಳಿನಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆದರೆ ಜೈಲಿನ ಒಳಗೆ ನಟನಿಗೆ ರಾಜಾತಿಥ್ಯ ನೀಡುತ್ತಿರುವ ಫೋಟೋಗಳು ಮತ್ತು ವಿಡಿಯೋ ಕರೆ ಮಾನಾಡಿರುವ ಸಂಗತಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಕೈದಿಯೊಬ್ಬ ಜೈಲಿನ ಹೊರಗಿರುವ ವ್ಯಕ್ತಿಗೆ ವಿಡಿಯೋ ಕಾಲ್ ಮಾಡಿ, ದರ್ಶನ್ ಅವರಿಂದ ಹಾಯ್ ಹೇಳಿಸಿದ್ದಾನೆ. ಆ ವಿಡಿಯೋ ಈಗ ವೈರಲ್ ಆಗಿದೆ.

ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​​ ಅವರು, ದರ್ಶನ್​ಗೆ ಜೈಲಿನಲ್ಲಿ ಆತಿಥ್ಯ ನೀಡಿದ್ದಕ್ಕೆ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ವಿಚಾರ ನಿನ್ನೆ ಗೊತ್ತಾಯಿತು. ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರೂ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಜೈಲಿನ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment