/newsfirstlive-kannada/media/post_attachments/wp-content/uploads/2024/04/Telangana-Student-Sucide.jpg)
ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ 12ನೇ ತರಗತಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದೆ. ಈ ರಿಸಲ್ಟ್ ನೋಡಿ 7 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ವರದಿಯಾಗಿದೆ. ಇಬ್ಬರು ವಿದ್ಯಾರ್ಥಿನಿಯರು, 5 ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿರೋದು ಬೆಚ್ಚಿ ಬೀಳಿಸಿದೆ.
ಕಳೆದ ಏಪ್ರಿಲ್ 24ರಂದು ಅಂದ್ರೆ 2 ದಿನದ ಹಿಂದೆ ತೆಲಂಗಾಣ ರಾಜ್ಯ ಪರೀಕ್ಷಾ ಮಂಡಳಿ 2024ನೇ ಸಾಲಿನ ಮಧ್ಯಂತರ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಿದೆ. ಈ ರಿಸಲ್ಟ್ ಹೊರ ಬಿದ್ದ 48 ಗಂಟೆಯ ಒಳಗಾಗಿ 7 ವಿದ್ಯಾರ್ಥಿಗಳು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಕುಸಿದು ಬಿದ್ದು ಸಾವು
ಆತ್ಮಹತ್ಯೆಗೆ ಶರಣಾದ 7 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ. ಕೆಲವರು 11ನೇ ತರಗತಿಯಲ್ಲಿ ಶೇಕಡಾ 61.06ರಷ್ಟು ಮತಗಳಿಸಿದ್ದರು. ಆದರೆ 12ನೇ ತರಗತಿಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಪರೀಕ್ಷೆಯಲ್ಲಿ ಫೇಲ್ ಆದ ಕಾರಣಕ್ಕೆ ಈ ಕೆಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.
ಮಂಚೇರಿಯಲ್ ಜಿಲ್ಲೆಯಲ್ಲಿ 16 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ಇವರು 12ನೇ ತರಗತಿ ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಫೇಲ್ ಆಗಿದ್ದರು. ಉಳಿದವರು ಸಹ 16-17 ವರ್ಷದ ವಯಸ್ಸಿನವರಾಗಿದ್ದು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಮೃತರನ್ನು ರಾಜೇಂದ್ರನಗರ, ಹೈದರಾಬಾದ್, ಖಮ್ಮಂ, ಮಹಬೂಬಾಬಾದ್ ಮತ್ತು ಕೊಲ್ಲೂರು ಮೂಲದವರು ಎಂದು ಗುರುತಿಸಲಾಗಿದೆ.
2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಹೊರ ಬಂದಾಗ ತೆಲಂಗಾಣದಲ್ಲಿ ಇಂತಹದೇ ಘಟನೆ ನಡೆದಿತ್ತು. ಅಂದು ಕೂಡ 22 ವಿದ್ಯಾರ್ಥಿಗಳು ತಮ್ಮ ಪ್ರಾಣ ಕಳೆದುಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us