/newsfirstlive-kannada/media/post_attachments/wp-content/uploads/2025/05/rain6.jpg)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ರಾತ್ರಿಯಿಡೀ ಸುರಿದ ಮಳೆಗೆ ಕಾಂಪೌಂಡ್ ಗೋಡೆ ಮನೆ ಬಿದ್ದು ಬಾಲಕಿ ಜೀವಬಿಟ್ಟಿರೋ ಘಟನೆ ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ:ಭಾರೀ ಮಳೆ.. ಕರ್ನಾಟಕದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..
ಕಾನಕರೆ ನಿವಾಸಿ ನೌಶಾದ್ ಎಂಬವರ ಪುತ್ರಿ ನಯೀಮ (7) ಮೃತ ಬಾಲಕಿ. ನೌಶಾದ ಅವರ ಮನೆಯ ಹಿಂಬದಿಯ ಕಾಂಪೌಂಡ್ ಗೋಡೆ ಕುಸಿದಿದೆ. ಆಗ ಮನೆ ಮೇಲೆ ಮಣ್ಣು ಬಿದಿದ್ದೆ. ಪರಿಣಾಮ ಮನೆಯ ಕಿಟಕಿ ಬಾಲಕಿಯ ಮೇಲೆ ಬಿದ್ದು ಗಂಭೀರ ಗಾಯಗೊಂಡ ಬಾಲಕಿ ನಯೀಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾಳೆ.
ಮತ್ತೊಂದು ಕಡೆ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಗ್ರಾಮ ಮಡುವಿನಕೋಡಿ ಗ್ರಾಮದಲ್ಲಿ ನಿರಂತರ ಮಳೆಗೆ ಮನೆ ಕುಸಿದಿದೆ. ಕಳೆದ ಹದಿನೈದು ದಿನದಿಂದ ನಿರಂತರವಾಗಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮಣ್ಣಿನ ಗೋಡೆ ಕುಸಿದಿದೆ. ಇದೇ ಘಟನೆಯಲ್ಲಿ ವೃದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಂಗೇಗೌಡ, ಸಾಕಮ್ಮ ಎಂಬುವವರಿಗೆ ಸೇರಿದ ಮನೆ ಒಂದು ಭಾಗದಲ್ಲಿ ಗೋಡೆ ಕುಸಿದಿದ್ದರಿಂದ ಬಚಾವ್ ಆಗಿದ್ದಾರೆ. ಹೀಗಾಗಿ ವೃದ್ದ ದಂಪತಿ ಸೂಕ್ತ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ