newsfirstkannada.com

ಭೀಕರ ದುರಂತ.. ರುದ್ರಪ್ರಯಾಗದಲ್ಲಿ ನದಿಗೆ ಉರುಳಿ ಬಿದ್ದ ಟೆಂಪೋ; 14 ಮಂದಿ ದಾರುಣ ಸಾವು

Share :

Published June 15, 2024 at 8:55pm

  23ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ಟೆಂಪೋ ಏಕಾಏಕಿ ಪಲ್ಟಿ

  ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ

  ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ SDRF ಮತ್ತು ಪೊಲೀಸ್ ಸಿಬ್ಬಂದಿ

ರುದ್ರಪ್ರಯಾಗ: 23 ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಅಲ್ಕಾನಂದ ನದಿಗೆ ಉರುಳಿ ಬಿದ್ದ ದಾರುಣ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 14 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ರುದ್ರಪ್ರಯಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದರ್ಶನ್​ ವಿರುದ್ಧ ಸ್ಟೇಟಸ್​ ಹಾಕಿದ್ದಕ್ಕೆ ನಿನ್ನನ್ನು ಜೀವಂತ ಸುಡುತ್ತೇವೆ ಎಂದ ಅಭಿಮಾನಿ! ಮುಂದೇನಾಯ್ತು ಗೊತ್ತಾ?

ರುದ್ರಪ್ರಯಾಗದ ಋಷಿಕೇಶ-ಬದರಿನಾಥ್ ಹೆದ್ದಾರಿಯಿಂದ ಚೋಪ್ಟಾ ಪ್ರದೇಶದ ಕಡೆಗೆ ಹೋಗುತ್ತಿದ್ದ ವೇಳೆ  ಈ ದುರ್ಘಟನೆ ಸಂಭವಿಸಿದೆ. ಟೆಂಪೋ ಟ್ರಾವೆಲರ್​ನಲ್ಲಿ ಒಟ್ಟು 23ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳವಾದ ಕಂದಕಕ್ಕೆ ಟೆಂಪೋ ಉರುಳಿ ಬಿದ್ದಿದೆ. ಪರಿಣಾಮ 14 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ SDRF ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಗಂಭೀರವಗಿ ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುವ ಕೆಲಸ ನಡೆಯುತ್ತಿದೆ. ಇನ್ನು ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ತಿಳಿಸಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸುವಂತೆ ಧಾಮಿ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಸಂಬಂಧಿಕರಿಗೆ PMNRFನಿಂದ ₹2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡಲಿದ್ದೇವೆ ಅಂತ ಸೂಚಿಸಿದ್ದಾರೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ದುರಂತ.. ರುದ್ರಪ್ರಯಾಗದಲ್ಲಿ ನದಿಗೆ ಉರುಳಿ ಬಿದ್ದ ಟೆಂಪೋ; 14 ಮಂದಿ ದಾರುಣ ಸಾವು

https://newsfirstlive.com/wp-content/uploads/2024/06/accident-2.jpg

Load More