newsfirstkannada.com

ಆಕ್ಸಿಜನ್​ ಕೊರತೆಯಿಂದ 8 ರೋಗಿಗಳು ಸಾವು.. ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಂಬಂಧಿಕರ ಆಕ್ರೋಶ

Share :

23-07-2023

    ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಆಕ್ಸಿಜನ್ ಸಿಗದೇ ರೋಗಿಗಳ ಸಾವು

    ಆಕ್ಸಿಜನ್ ಕೊರತೆಯಲ್ಲ, ಕಾಯಿಲೆಯಿಂದ ಅವರು ಮೃತಪಟ್ಟರು..!

    ಆಸ್ಪತ್ರೆ ಸಿಬ್ಬಂದಿ, ಸಂಬಂಧಿಕರ ನಡುವೆ ಆರೋಪ-ಪ್ರತ್ಯಾರೋಪ

ಆಕ್ಸಿಜನ್ ಕೊರತೆಯಿಂದ 8 ರೋಗಿಗಳು ಸಾವನ್ನಪ್ಪಿರುವ ದುರ್ಘಟನೆ ಆಂಧ್ರ ಪ್ರದೇಶದ ನೆಲ್ಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ತೀವ್ರವಾದ ವಿರೋಧ ವ್ಯಕ್ತಪಡಿಸಲಾಗಿದೆ.

ಸಾವನ್ನಪ್ಪಿರುವ ರೋಗಿಗಳ ಪೈಕಿ 6 ಮಂದಿ ವೈದ್ಯಕೀಯ ತೀವ್ರ ನಿಗಾ ಘಟಕ (MICU)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನುಳಿದ ಇಬ್ಬರು ಪಕ್ಕದ ವಾರ್ಡ್​ನ ರೋಗಿಗಳು ಆಗಿದ್ದಾರೆ. ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟ ಕಾರಣ ಆಸ್ಪತ್ರೆಯ ವೈದ್ಯರ​ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಆಕ್ಸಿಜನ್ ಸರಿಯಾದ ಸಮಯಕ್ಕೆ ಸಿಗದೇ ಸಾವನ್ನಪ್ಪಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಅಧೀಕ್ಷಕರು ಸ್ಥಳಕ್ಕೆ ಆಗಮಿಸಿ ತನಿಖೆಗೆ ನಡೆಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ. ಈ ಬಗ್ಗೆ ಆರೋಪಗಳನ್ನೆಲ್ಲ ಅಲ್ಲಗಳೆದಿರುವ ಆಸ್ಪತ್ರೆಯ ಸಿಬ್ಬಂದಿ ಹೇಳುವ ಪ್ರಕಾರ, ರೋಗಿಗಳು ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿಲ್ಲ. ಅವರ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಸಾಕಷ್ಟು ಇದೆ. ಯಾವ ರೋಗಿಗೆ ಕೊರತೆಯಾಗಿಲ್ಲ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆಕ್ಸಿಜನ್​ ಕೊರತೆಯಿಂದ 8 ರೋಗಿಗಳು ಸಾವು.. ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಂಬಂಧಿಕರ ಆಕ್ರೋಶ

https://newsfirstlive.com/wp-content/uploads/2023/07/AP_8_patients_die.jpg

Load More