Advertisment

8 ವರ್ಷದ ಬಾಲಕಿ ದಾರುಣ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

author-image
Ganesh
Updated On
8 ವರ್ಷದ ಬಾಲಕಿ ದಾರುಣ ಸಾವು.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Advertisment
  • ಹಾಸನ ಜಿಲ್ಲೆಯಲ್ಲಿ ಮಾರಕ ಡೆಂಘೀ ಆರ್ಭಟ
  • ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು
  • ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಮೃದ್ಧಿ ಸಾವು

ಹಾಸನ: ಜಿಲ್ಲೆಯಲ್ಲಿ ಮಾರಕ ಡೆಂಘೀ ಆರ್ಭಟ ಮುಂದುವರೆದಿದೆ. ಇದೀಗ ಎಂಟು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಡೆಂಘೀಗೆ ಮೃತಪಟ್ಟಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

Advertisment

ಸಮೃದ್ಧಿ (8) ಮೃತಪಟ್ಟ ಬಾಲಕಿ. ಹೊಳೆನರಸೀಪುರ ತಾಲೂಕಿನ ದೊಡ್ಡಹಳ್ಳಿ ಗ್ರಾಮದಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿಯಾಗಿದ್ದ ಸಮೃದ್ಧಿ, ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು.

ಮೂರು ದಿನದ ಹಿಂದೆ ಹಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಮೃದ್ಧಿ ಸಾವನ್ನಪ್ಪಿದ್ದಾಳೆ. ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದಾರೆ. ಹೊಳೆನರಸೀಪುರ ತಾಲೂಕಿನಲ್ಲೇ ಮೂವರು ಬಾಲಕಿಯರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಧ್ರುವ ಸರ್ಜಾ ಅವರ ಜಿಮ್ ಟ್ರೈನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್.. ಅಸಲಿ ವಿಚಾರ ಬಯಲು..!

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment