/newsfirstlive-kannada/media/post_attachments/wp-content/uploads/2024/07/uttara-pradesh1.jpg)
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ರಾತಿ ಭಾನ್ಪುರ್ ಎಂಬ ಗ್ರಾಮದಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದೆ. ಹೀಗೆ ಭೋಲೆ ಬಾಬಾ ಪ್ರವಚನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಹೀಗೆ ಭೋಲೆ ಬಾಬಾ ಪ್ರವಚನ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದವರು ಮಸಣ ಸೇರಿದ್ದಾರೆ.
ಇದನ್ನೂ ಓದಿ:BREAKING: ಪ್ರಾರ್ಥನಾ ಸಭೆಯಲ್ಲಿ ಘೋರ ದುರಂತ.. 23 ಮಹಿಳೆಯರು, 3 ಮಕ್ಕಳು ಸೇರಿ 27 ಮಂದಿ ಸಾವು
ಹೌದು, ಭೋಲೆ ಬಾಬಾ ಪ್ರವಚನವೊಂದನ್ನು ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರವಚನ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಜಾಗವಿಲ್ಲದೆ ಸಾಕಷ್ಟು ಜನರು ಪರದಾಡುತ್ತಿದ್ದರು. ಇದೇ ವೇಳೆ ನೂಕು, ನುಗ್ಗಲು ಉಂಟಾದ ಪರಿಣಾಮ 80ಕ್ಕೂ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಇನ್ನು, ಇದೇ ಸಂಬಂರ್ಧದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದರು.
ಒಟ್ಟು 15 ಮಹಿಳೆಯರು ಮತ್ತು ಮಕ್ಕಳನ್ನು ಎಟಾಹ್ ಮೆಡಿಕಲ್ ಕಾಲೇಜಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ. ಆದರೆ ಇಲ್ಲಿಯವರೆಗೆ 25 ಮಹಿಳೆಯರು ಸೇರಿದಂತೆ ಒಟ್ಟು 27 ಶವಗಳನ್ನು ಸ್ವೀಕರಿಸಿದ್ದೇವೆ ಎಂದು ಮುಖ್ಯ ವೈದ್ಯಾಧಿಕಾರಿ ರಾಜ್‌ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ. ಸದ್ಯ ಈ ಘಟನೆಯಲ್ಲಿ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ಘಟನಾ ಸ್ಥಳದಲ್ಲಿ ಮೃತದೇಹಗಳನ್ನು ಗುರುತಿಸುವ ಪ್ರಕ್ರಿಯೆ ಪೊಲೀಸರು ನಡೆಸುತ್ತಿದ್ದಾರೆ.
ಇದೇ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿಗಳು, ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಕುಟುಂಬದಲ್ಲಿ ತಂದೆ, ತಾಯಿ, ಮಕ್ಕಳು, ಹೆಂಡತಿ, ಅಣ್ಣ, ತಮ್ಮ, ಅಕ್ಕ, ತಂಗಿಯನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ