Advertisment

KSRTC ಉದ್ಯೋಗ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್​ನ್ಯೂಸ್; ರಾಮಲಿಂಗಾ ರೆಡ್ಡಿಯಿಂದ ಹೊಸ ಅಪ್​ಡೇಟ್​..!

author-image
Ganesh
Updated On
KSRTC ಉದ್ಯೋಗ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್​ನ್ಯೂಸ್; ರಾಮಲಿಂಗಾ ರೆಡ್ಡಿಯಿಂದ ಹೊಸ ಅಪ್​ಡೇಟ್​..!
Advertisment
  • KSRTCಗೆ 13 ಸಾವಿರ ಸಿಬ್ಬಂದಿ ಅವಶ್ಯಕತೆ ಇದೆ
  • ಹೊಸ ಬಸ್ ಖರೀದಿ ಪ್ರಕ್ರಿಯೆ ಬಗ್ಗೆಯೂ ರೆಡ್ಡಿ ಮಾಹಿತಿ
  • ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಮಾತು

ಬೆಂಗಳೂರು: ಶೀಘ್ರದಲ್ಲೇ ಕೆಎಸ್​​ಆರ್​ಟಿಸಿ ವಿಭಾಗದಲ್ಲಿ 8,600 ಸಿಬ್ಬಂದಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.

Advertisment

2016 ದ ಕೆಎಸ್‌ಆರ್‌ಟಿಸಿಯಲ್ಲಿ ಯಾವುದೇ ನೇಮಕ ಪ್ರಕ್ರಿಯೆ ನಡೆದಿಲ್ಲ. ಅಲ್ಲಿಂದ ಇಲ್ಲಿಯವರೆಗೆ 3,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಒಟ್ಟಾರೆ ಕೆಎಸ್‌ಆರ್‌ಟಿಸಿಯಲ್ಲಿ 13 ಸಾವಿರ ಸಿಬ್ಬಂದಿ ಅವಶ್ಯಕತೆ ಇದೆ. ಸದ್ಯ 8,600 ಸಿಬ್ಬಂದಿ ನೇಮಕಕ್ಕೆ ಅನುಮೋದನೆ ಸಿಕ್ಕಿದೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಹೊಸ ಬಸ್ ಖರೀದಿ ಪ್ರಕ್ರಿಯೆ ಬಗ್ಗೆಯೂ ಮಾಹಿತಿ ನೀಡಿದರು. ಶಾಲಾ ಮಕ್ಕಳು ಹೆಚ್ಚು ಓಡಾಡುವ ಮಾರ್ಗಗಳಿಗೆ ಹೆಚ್ಚುವರಿ ಬಸ್‌ ಬಿಡುವ ಬಗ್ಗೆಯೂ ಯೋಜನೆ ಹಾಕಿಕೊಂಡಿದ್ದೇವೆ. ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ವಿಮೆ ಪರಿಹಾರ ಮೊತ್ತವನ್ನು 2 ರಿಂದ 3 ಲಕ್ಷದಿಂದ 4 ರಿಂದ 10 ಲಕ್ಷಕ್ಕೆ ಏರಿಕೆ ಮಾಡಿದ್ದೇವೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ನೀಡಬೇಕೆಂಬುದು ಬಹು ದಿನಗಳ ಬೇಡಿಕೆ ಬಗ್ಗೆಯೂ ಬಜೆಟ್​ನಲ್ಲಿ ಮಂಡನೆ ಮಾಡುವುದಾಗಿ ತಿಳಿಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment