ಶಾಲೆಯಲ್ಲೇ ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿ.. ಸೀನಿಯರ್ಸ್​ ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ?

author-image
AS Harshith
Updated On
ಶಾಲೆಯಲ್ಲೇ ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿ.. ಸೀನಿಯರ್ಸ್​ ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ?
Advertisment
  • ನವೋದಯ ಶಾಲೆಯಲ್ಲಿ ಬೆಳಕಿಗೆ ಬಂದ ಘಟನೆ
  • ಸೀನಿಯರ್ ವಿದ್ಯಾರ್ಥಿಗಳು ರೇಗಿಸಿದ್ದಕ್ಕೆ ಆತ್ಮಹತ್ಯೆ ಮಾಡಿದನೇ?
  • ನೇಣು ಹಾಕಿಕೊಂಡು ಸಾವನ್ನಪ್ಪಿದ 13 ವರ್ಷದ ಬಾಲಕ

ಚಿತ್ತದುರ್ಗ: 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೈಕ್​​ ಸವಾರನ ಮೇಲೆ ಹರಿದ ಟಿಪ್ಪರ್​.. ಟೈರ್​ ಅಡಿಗೆ ಸಿಲುಕಿ ಸಾವನ್ನಪ್ಪಿದ ವ್ಯಕ್ತಿ

8ನೇ ತರಗತಿ ವಿದ್ಯಾರ್ಥಿ ಪ್ರೇಮ ಸಾಗರ(13) ನೇಣಿಗೆ ಶರಣಾದ ವಿದ್ಯಾರ್ಥಿ. ಈತ ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದವನು. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಶರಣಾಗಿದ್ದಾನೆ ಶಂಕೆ ವ್ಯಕ್ತವಾಗಿದೆ. ತನ್ನ ವಾಸ್ತವ್ಯ ಕೊಠಡಿಗೆ ಬಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.. ಹಾಸ್ಟೆಲ್​ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆ

ಪ್ರೇಮ ಸಾಗರ ಮೃತದೇಹವನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment