/newsfirstlive-kannada/media/post_attachments/wp-content/uploads/2024/07/Money.jpg)
ಕೇಂದ್ರ ಸರ್ಕಾರಿ ನೌಕರರಿಗೆ ಗುಡ್​ ನ್ಯೂಸ್ ಕೊಡಲು ಮೋದಿ ಸರ್ಕಾರ ಸಿದ್ಧತೆ ನಡೆಸಿದೆ. 8ನೇ ವೇತನ ಆಯೋಗದ ಪರಿಷ್ಕರಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು. ಸದ್ಯದಲ್ಲಿಯೇ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳು ಮತ್ತು ನಿವೃತ್ತಿ ವೇತನದಲ್ಲಿ ಪರಿಷ್ಕರಣೆ ಆಗಲಿದೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನ್ ವೈಷ್ಣವ್ 8ನೇ ವೇತನ ಆಯೋಗಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮತ್ತೊಂದು ಸಾಧನೆ; ಚಂದ್ರಯಾನ-4, ಗಗನಯಾನಕ್ಕೆ ವೇದಿಕೆ ಸಿದ್ಧ..!
ಅಶ್ವಿನ್ ವೈಷ್ಣವ್ ಅವರು ಹೇಳುವ ಪ್ರಕಾರ 7ನೇ ವೇತನ ಆಯೋವನ್ನು 2016 ರಲ್ಲಿ ಅಳವಡಿಸಲಾಗಿತ್ತು. ಸದ್ಯ ಅದರ ಅವಧಿ 2026ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಈಗ 8ನೇ ವೇತನ ಆಯೋಗಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಈಗ ಒಪ್ಪಿಗೆ ನೀಡಲಾಗಿರುವ 8ನೇ ವೇತನ ಆಯೋಗದ ಫಲಾನುಭವ 2026ರಿಂದ ಸಿಗಲಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಇದನ್ನೂ ಓದಿ:400ಕ್ಕೂ ಹೆಚ್ಚು ಹುದ್ದೆಗಳನ್ನ ಆಹ್ವಾನಿಸಿದ ಕೋಲ್ ಇಂಡಿಯಾ ಲಿಮಿಟೆಡ್.. ಕೂಡಲೇ ಅಪ್ಲೇ ಮಾಡಿ
ದೇಶದಲ್ಲಿ ಒಟ್ಟು ಒಂದು ಕೋಟಿಗೂ ಅಧಿಕ ಜನರು ಕೇಂದ್ರ ಸರ್ಕಾರಿ ನೌಕರರು ಹಾಗೂ ನಿವೃತ್ತಿಗೊಂಡವರು ಇದ್ದಾರೆ. ಕಳೆದ ಹಲವು ವರ್ಷಗಳಿಂದ 8ನೇ ವೇತನ ಆಯೋಗಕ್ಕೆ ಯಾವಾಗ ಒಪ್ಪಿಗೆ ಸಿಗಲಿದೆ ಎಂದು ಕಾಯುತ್ತಿದ್ದರು. ಸದ್ಯ ಅವರ ನಿರೀಕ್ಷೆಯಂತೆ 8ನೇ ವೇತನ ಅಯೋಗಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಸದ್ಯದಲ್ಲಿಯೇ ಕೇಂದ್ರ ಸರ್ಕಾರಿ ನೌಕರರ ವೇತನ, ತುಟ್ಟಿ ಭತ್ಯೆ ಹಾಗೂ ಪೆನ್ಷನ್​ಗಳಲ್ಲಿ ಏರಿಕೆಯಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us