newsfirstkannada.com

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ; 9 ಮಂದಿ ಸಾವು

Share :

Published February 17, 2024 at 3:09pm

Update February 17, 2024 at 3:16pm

    ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಫೋಟಕ್ಕೆ 9 ಮಂದಿ ಬಲಿ

    ಗಂಭೀರವಾಗಿ ಗಾಯಗೊಂಡವರ ಬದುಕಿಸಲು ಹರಸಾಹಸ

    ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡು

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡು ಒಟ್ಟು 9 ಮಂದಿ ಸಾವನ್ನಪ್ಪಿರೋ ದಾರುಣ ಘಟನೆ ತಮಿಳುನಾಡಿನ ವೆಂಬಕೊಟ್ಟೈ ಎಂಬಲ್ಲಿ ನಡೆದಿದೆ. ಪಟಾಕಿ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 9 ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದ್ದು, ಪಟಾಕಿ ಅವಘಡದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ; 9 ಮಂದಿ ಸಾವು

https://newsfirstlive.com/wp-content/uploads/2024/02/tamil-nadu.jpg

Load More