newsfirstkannada.com

ದರ್ಶನ್‌ಗೂ ಮೊದಲೇ ಪವಿತ್ರಾ ಪರಪ್ಪನ ಅಗ್ರಹಾರ ಜೈಲಿಗೆ; ನ್ಯಾಯಾಂಗ ಬಂಧನಕ್ಕೆ 9 ಕಾರಣ!

Share :

Published June 20, 2024 at 8:58pm

    A1 ಪವಿತ್ರಾ ಗೌಡ ಅವರೇ ಕೃತ್ಯಕ್ಕೆ ಪ್ರಮುಖ ಕಾರಣಕರ್ತೆಯಾಗಿದ್ದಾರೆ

    ಆರೋಪಿಗಳು ಕೃತ್ಯದ ನಂತರ ಮತ್ತೆ ಒಳಸಂಚು ರೂಪಿಸಿ ಸಾಕ್ಷ್ಯ ನಾಶ

    ಹಣ ಬಲ ಮತ್ತು ಅಭಿಮಾನಿ ಬಳಗವನ್ನು ಬಳಸಿಕೊಂಡು ಅಪಹರಣ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನ ತನಿಖೆಯಲ್ಲಿ ಪೊಲೀಸರು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಸತತ 10 ದಿನಗಳಿಂದ ಆರೋಪಿಗಳ ವಿಚಾರಣೆ ನಡೆಸಿದ್ದ ಪೊಲೀಸರು ಇಂದು ಕೋರ್ಟ್‌ಗೆ ಹಾಜರುಪಡಿಸಿದ್ದರು. ಆರೋಪಿಗಳ ಪೈಕಿ A1 ಪವಿತ್ರಾ ಗೌಡ ಅವರನ್ನು ಇಂದು ಪೊಲೀಸರು ತಮ್ಮ ಕಸ್ಟಡಿಗೆ ಕೇಳಲೇ ಇಲ್ಲ. ಇದಕ್ಕೆ ಹಲವು ಕಾರಣಗಳನ್ನು ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖಿಸಿರುವ ಪೊಲೀಸರು ಪವಿತ್ರಾಗೌಡ & ಇತರರಿಗೆ ನ್ಯಾಯಾಂಗ ಬಂಧನ ಆಗುವಂತೆ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಲು.. ಒಂದಲ್ಲ, ಬರೋಬ್ಬರಿ 16 ಕಾರಣಗಳು! ಏನವು? 

ಪವಿತ್ರಾಗೌಡಗೆ ನ್ಯಾಯಾಂಗ ಬಂಧನ ಏಕೆ?

  1. A1, A3, A7, A11, A12, A13, ಹಾಗೂ A16 ಆರೋಪಿಗಳು ಕೊಲೆಯಂತ ಒಂದು ಗಂಭೀರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿ ಕೃತ್ಯ ಎಸಗಿದ್ದಾರೆ. ಇವರುಗಳಿಗೆ ಕಾನೂನಿನ ಮೇಲೆ ಕಿಂಚಿತ್ತು ಗೌರವೇ ಇಲ್ಲದೇ ಇರುವುದು ಈವರೆಗಿನ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿರುತ್ತದೆ.
  2. A1 ಆರೋಪಿಯೇ ಕೃತ್ಯಕ್ಕೆ ಪ್ರಮುಖ ಕಾರಣಕರ್ತೆಯಾಗಿದ್ದು ಈಕೆಯು ಪ್ರಚೋದನೆ ನೀಡಿ ಇತರೆ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಒಳಚಂಚು ರೂಪಿಸಿರುವುದು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.
  3. A2 ನಟ ದರ್ಶನ್ ಅವರು ತನ್ನ ಹಣ ಹಾಗೂ ಇತರೆ ಆರೋಪಿಗಳನ್ನು ಒಳಗೊಂಡ ತನ್ನ ಅಭಿಮಾನಿ ಬಳಗವನ್ನು ಬಳಸಿಕೊಂಡು ಕೃತ್ಯದಲ್ಲಿ ಭಾಗಿಯಾಗಿ ಹಾಗೂ ಭಾಗಿಯಾಗಿಸಿ ನೆಲದ ಕಾನೂನನ್ನು ದುರುಪಯೊಗ ಪಡಿಸಿಕೊಂಡಿರುವುದು ಸಾಕ್ಷ್ಯಾಧಾರಗಳಿಂದ ಕಂಡು ಬಂದಿರುತ್ತದೆ.

  4. A2 ಆರೋಪಿಯು ತನ್ನ ಹಣ ಬಲ ಮತ್ತು ಪ್ರಭಾವಿ ಅಭಿಮಾನಿ ಬಳಗವನ್ನು ಬಳಸಿಕೊಂಡು ಮೃತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದ A4 ಮತ್ತು A6ರಿಂದ A8 ರವರೆಗಿನ ಆರೋಪಿಗಳಿಂದ ಆತನನ್ನು ಅಪಹರಣ ಮಾಡಿಸಿ ಮೃತನ ಬಳಿಯಿಂದ ಚಿನ್ನಾಭರಣಗಳನ್ನು ಬೆದರಿಸಿ ಬಿಚ್ಚಿಸಿಕೊಂಡಿದ್ದಾರೆ. ತನ್ನ ದುಷ್ಕೃತ್ಯಗಳನ್ನು ಎಸಗಲು ಪಟ್ಟಣಗೆರೆಯ ಶೆಡ್‌ ಅನ್ನು ಅಡ್ಡೆಯನ್ನಾಗಿ ಮಾಡಿಕೊಂಡಿದ್ದರು. ಪಟ್ಟಣಗೆರೆಯ A10 ಆರೋಪಿ ವಿನಯ್ ಸಂಬಂಧಿಯಾದ ಜಯಣ್ಣ ಅವರಿಗೆ ಸೇರಿದ ಶೆಡ್‌ಗೆ ಕರೆತಂದು ಅಲ್ಲಿ A1 ಆರೋಪಿಯು ಸೇರಿದಂತೆ ಇತರೆ ಆರೋಪಿಗಳೊಂದಿಗೆ ಸಮಾನ ಉದ್ದೇಶದಿಂದ ಎಲ್ಲರೂ ಸೇರಿ ಮೃತನ ಮೇಲೆ ಅಮಾನುಷವಾಗಿ ಮತ್ತು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿರುವುದು ಇದುವರೆಗಿನ ತನಿಖೆಯಲ್ಲಿ ಗೊತ್ತಾಗಿದೆ. ಸಂಗ್ರಹಿಸಿರುವ ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕವಾಗಿ ಸಂಗ್ರಹಿಸಿರುವ ಸಾಕ್ಷ್ಯಾಧಾರಗಳಿಂದ ಇದು ದೃಢಪಟ್ಟಿರುತ್ತದೆ.
  5. ಆರೋಪಿಗಳು ಕೃತ್ಯದ ನಂತರ ಮತ್ತೆ ಒಳಸಂಚು ರೂಪಿಸಿ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಶವವನ್ನು ಸಾಗಿಸಲು ತಮ್ಮ ಹಣದ ಪ್ರಭಾವ ಬಳಸಿ ಕ್ರಿಮಿನಲ್ ಹಿನ್ನಲೆಯುಳ್ಳ ಆಸಾಮಿಗಳಿಗೆ ಹಣದ ಆಮಿಷ ತೋರಿಸಿ ಅವರುಗಳ ಮೂಲಕ ಶವವನ್ನು ಕೃತ್ಯ ನಡೆದ ಸ್ಥಳದಿಂದ ಬೇರೆ ಕಡೆ ಸಾಗಿಸಿ ಸಾಕ್ಷಿ ನಾಶ ಪಡಿಸಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ.
  6. ಪ್ರಕರಣದ A2, A4, A15, A16 ರವರುಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿರುತ್ತಾರೆ. ಆರೋಪಿಗಳು ಮೃತನನ್ನು ಕೊಲೆ ಮಾಡಿ ನಂತರ ತನ್ನ ಹಣದ ಪ್ರಭಾವದಿಂದ ಬೇರೆ ವ್ಯಕ್ತಿಗಳನ್ನು ಕೊಲೆಯಲ್ಲಿ ಭಾಗಿಯಾರುವುದಾಗಿ ಬಿಂಬಿಸಿ ಪ್ರಕರಣದಿಂದ ತಾವುಗಳು ನುಣುಚಿಕೊಳ್ಳಲು ಪ್ರಯತ್ನಿಸಿರುವುದು ತನಿಖೆಯಲ್ಲಿ ಕಂಡು ಬಂದಿರುತ್ತದೆ.
  7. ಪ್ರಕರಣದ ಎಲ್ಲಾ ಆರೋಪಿಗಳು ಸಮಾನ ಉದ್ದೇಶದಿಂದ ಕೃತ್ಯ ಎಸಗಲು ಮತ್ತು ಕೃತ್ಯ ನಡೆದ ನಂತರ ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಈಗಾಗಲೇ ನಾಶಪಡಿಸಿರುವುದು ಮತ್ತು ನಾಶಪಡಿಸಲು ಪ್ರಯತ್ನಿಸಿರುವುದು ಕಂಡು ಬಂದಿರುತ್ತದೆ.
  8. A1 ಮತ್ತು A2 ಆರೋಪಿಗಳು ಇತರೆ ಆರೋಪಿಗಳೊಂದಿಗೆ ಸೇರಿ ತಮ್ಮ ಅಭಿಮಾನಿ ಬಳಗವನ್ನು ಬಳಸಿಕೊಂಡು ಅವರುಗಳ ಮೂಲಕ ಪ್ರಕರಣದ ತನಿಖೆಗೆ ನಿರಂತರ ಅಡ್ಡಿಪಡಿಸುತ್ತಿರುತ್ತಿದ್ದಾರೆ.
  9. ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಆರೋಪಿಗಳು ನೇರವಾಗಿ ಭಾಗಿಯಾಗಿರುವುದು ಕಂಡು ಬಂದಿದೆ. ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್‌ಗೂ ಮೊದಲೇ ಪವಿತ್ರಾ ಪರಪ್ಪನ ಅಗ್ರಹಾರ ಜೈಲಿಗೆ; ನ್ಯಾಯಾಂಗ ಬಂಧನಕ್ಕೆ 9 ಕಾರಣ!

https://newsfirstlive.com/wp-content/uploads/2024/06/darshan25.jpg

Load More