newsfirstkannada.com

10, 20 ಕೋಟಿ ಅಲ್ಲವೇ ಅಲ್ಲ.. ಕರ್ನಾಟಕದ ಈ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 98.52 ಕೋಟಿ ಮೌಲ್ಯದ ಮದ್ಯ ಜಪ್ತಿ..!

Share :

Published April 4, 2024 at 8:17am

Update April 4, 2024 at 8:18am

  ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಲಾಗಿತ್ತು

  ಅಕ್ರಮ ಮದ್ಯ ಸಂಗ್ರಹ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

  ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ

ಚಾಮರಾಜನಗರ: ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಚುನಾವಣಾ ಅಧಿಕಾರಿಗಳು ನಿರಂತರವಾಗಿ ಶ್ರಮ ವಹಿಸುತ್ತಿದ್ದಾರೆ. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದು, ಅಂತೆಯೇ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: RCB ಹುಡುಗರ ಅತೀ ದೊಡ್ಡ ದಾಖಲೆ ಧೂಳಿಪಟ ಮಾಡಿದ ಕೆಕೆಆರ್​; ಏನದು..?

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ತಾಂಡ್ಯದಲ್ಲಿ ಬರೋಬ್ಬರಿ 98 ಕೋಟಿ 52 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೀವರೀಸ್‌ ಲಿಮಿಟೆಡ್‍ನ ಘಟಕದಲ್ಲಿ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಮತ್ತೊಂದು ದುರಂತ; ತೀವ್ರ ಸ್ಫೋಟಕ್ಕೆ ಐವರು ಸ್ಥಳದಲ್ಲೇ ಸಾವು

ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಅತಿದೊಡ್ಡ ಕಾರ್ಯಾಚರಣೆ ನಡೆದಿದೆ. ಅಲ್ಲದೇ ಕಂಪನಿ ವಿರುದ್ಧ ಎಫ್​ಐಆರ್​ ಕೂಡ ದಾಖಲು ಮಾಡಲಾಗಿದೆ. ಚುನಾವಣಾಧಿಕಾರಿಗಳಿಗೆ ಏಪ್ರಿಲ್ 2ರಂದು ಅನಾಮಧೇಯ ದೂರವಾಣಿ ಕರೆ ಬಂದಿತ್ತು.
ಅದನ್ನು ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಜಿಲ್ಲಾ ಚುನಾವಣಾಧಿಕಾರಿ ನೀಡಿದ ಮೌಖಿಕ ಆದೇಶದನ್ವಯ ಬ್ರೀವರಿಸ್ ಘಟಕದ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಮದ್ಯವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರೋದು ಬೆಳಕಿಗೆ ಬಂದಿದೆ. ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬರ್ತ್​​ಡೇ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿದ್ದಾಗ ಭೀಕರ ಅಪಘಾತ; ತಾಯಿ ಮಗು ಸಾವು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

10, 20 ಕೋಟಿ ಅಲ್ಲವೇ ಅಲ್ಲ.. ಕರ್ನಾಟಕದ ಈ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 98.52 ಕೋಟಿ ಮೌಲ್ಯದ ಮದ್ಯ ಜಪ್ತಿ..!

https://newsfirstlive.com/wp-content/uploads/2024/04/CHN_WINE.jpg

Load More