ಹೆಂಡತಿ ವಿವಸ್ತ್ರ್ರಗೊಳಿಸಿ ಊರೆಲ್ಲಾ ಮೆರವಣಿಗೆ ಮಾಡಿದ ಗಂಡ
ಸೊಸೆಯ ವಿವಸ್ತ್ರಗೊಳಿಸಲು ಅತ್ತೆ, ಮಾವನಿಂದಲೂ ಕುಮ್ಮಕ್ಕು!
ಮತ್ತೊಂದು ಅಮಾನವೀಯ ಘಟನೆಗೆ ದೇಶಾದ್ಯಂತ ಭಾರೀ ವಿರೋಧ
ಜೈಪುರ: ಅಕ್ರಮ ಸಂಬಂಧದ ಅನುಮಾನಕ್ಕೆ ಗಂಡ ತನ್ನ ಹೆಂಡತಿಯನ್ನು ಊರಿನ ಜನರ ಮುಂದೆಯೇ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ಅತ್ತೆ, ಮಾವ ಕೂಡ ಕುಮ್ಮಕ್ಕು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ಈ ಅನಾಗರಿಕ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪೋಷಕರ ಮಾತು ಕೇಳಿಕೊಂಡು ಪತಿಯು ತನ್ನ 21 ವರ್ಷದ ಪತ್ನಿಯನ್ನೇ ವಿವಸ್ತ್ರಗೊಳಿಸಿದ್ದಾನೆ. ಬಳಿಕ ಆಕೆಗೆ ಮನ ಬಂದಂತೆ ಥಳಿಸಿ ನಂತರ ಆಕೆಯನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಇದನ್ನು ಅಲ್ಲಿದ್ದವರೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.
ಸದ್ಯ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರಿಂದ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರು ಶೀಘ್ರವಾಗಿ ಕ್ರಮ ತೆಗೆದುಕೊಂಡು ಆರೋಪಿಗಳನ್ನ ಕೋರ್ಟ್ನಲ್ಲಿ ವಿಚಾರಣೆ ನಡೆಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು. ಎಡಿಜಿಪಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
प्रतापगढ़ जिले में पीहर और ससुराल पक्ष के आपसी पारिवारिक विवाद में ससुराल पक्ष के लोगों द्वारा एक महिला को निर्वस्त्र करने का एक वीडियो सामने आया है।
पुलिस महानिदेशक को एडीजी क्राइम को मौके पर भेजने एवं इस मामले में कड़ी से कड़ी कार्रवाई के निर्देश दिए हैं।
सभ्य समाज में इस…
— Ashok Gehlot (@ashokgehlot51) September 1, 2023
ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದೇನು?
ಮದುವೆಯಾಗಿದ್ದರು ಮಹಿಳೆಯು ಇನ್ನೊಂದು ಊರಿನಲ್ಲಿ ಬೇರೊಬ್ಬ ವ್ಯಕ್ತಿ ಜೊತೆ ಇರುತ್ತಿದ್ದಳು. ಇದನ್ನು ನೋಡಿ ಸಹಿಸಿಕೊಳ್ಳಲಾಗದೇ ಆಕೆಯ ಅತ್ತೆ-ಮಾವ ತಮ್ಮ ಊರಿಗೆ ಕರೆದುಕೊಂಡು ಬಂದು ಮನ ಬಂದಂತೆ ಥಳಿಸಿ, ಬಳಿಕ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದಾರೆ ಎಂದು ರಾಜಸ್ತಾನದ ಡೈರಕ್ಟರ್ ಜನರಲ್ ಆಫ್ ಪೊಲೀಸ್ ಉಮೇಶ್ ಮಿಶ್ರಾ ಹೇಳಿದ್ದಾರೆ. ಆರೋಪಿಗಳನ್ನು ಬಂಧಿಸಲು 6 ಪೊಲೀಸರ ತಂಡಗಳನ್ನು ರಚಿಸಲಾಗಿದ್ದು, ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ