newsfirstkannada.com

×

‘ಬಿಟ್​ಕಾಯಿನ್’ ಹಗರಣವನ್ನೂ ತನಿಖೆ ಮಾಡ್ತೇವೆ -ಡಾ.ಪರಮೇಶ್ವರ್ ಘೋಷಣೆ

Share :

Published June 14, 2023 at 11:39am

    BJP ಸರ್ಕಾರದ ಅವಧಿಯಲ್ಲಿ ನಡೆದಿದ್ದ ಹಗರಣ

    ನಿನ್ನೆ ತನಿಖೆಗೆ ಆಗ್ರಹಿಸಿದ್ದ ಸಂಸದ ಪ್ರತಾಪ್ ಸಿಂಹ

    ಏನಿದು ಬಿಟ್​ಕಾಯಿನ್ ಹಗರಣ? ನಿಜಕ್ಕೂ ಏನಾಗಿತ್ತು?

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿಬಂದಿರುವ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡುವ ಭರವಸೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಪರಮೇಶ್ವರ್, ಬಿಟ್ ಕಾಯಿನ್ ಪ್ರಕರಣವನ್ನೂ ಮರು ತನಿಖೆ ಮಾಡುತ್ತೇವೆ. ಬಿಜೆಪಿಯವರು ಈಗಾಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನದಿಂದ ಇರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡ್ತೇವೆ ಎಂದಿದ್ದಾರೆ.

ಪ್ರತಾಪ್ ಸಿಂಹ ಪ್ರಶ್ನೆ

ನಿನ್ನೆ ಮೈಸೂರಿನಲ್ಲಿ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿಬಂದಿದ್ದ ಬಿಟ್​ ಕಾಯಿನ್ ಹಗರಣದ ಬಗ್ಗೆ ಕಾಂಗ್ರೆಸ್​ ನಾಯಕರು ಚುನಾವಣೆಯಲ್ಲಿ ಬಳಸಿಕೊಂಡರು. ಇವತ್ತು ಯಾಕೆ ಆ ಪ್ರಕರಣದ ಬಗ್ಗೆ ತನಿಖೆ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದರು. ಈ ಬೆನ್ನಲ್ಲೇ ಇಂದು ಪರಮೇಶ್ವರ್ ಬಿಟ್ ಕಾಯಿನ್ ಹಗರಣವನ್ನು ತನಿಖೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏನಿದು ಬಿಟ್ ಕಾಯಿನ್ ಹಗರಣ..?

ನವೆಂಬರ್ 2020ರಲ್ಲಿ ಸಿಸಿಬಿ ಪೊಲೀಸರು ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಆತನ ಸಹಚರರನ್ನು ಡ್ರಗ್​ ಕೇಸ್​ನಲ್ಲಿ ಬಂಧಿಸಿದ್ದರು. ಶ್ರೀಕಿ ಡಾರ್ಕ್‌ನೆಟ್ ಮೂಲಕ ಬಿಟ್‌ಕಾಯಿನ್‌ಗಳನ್ನು ಬಳಸಿಕೊಂಡು ಡ್ರಗ್‌ಗಳನ್ನು ಸಂಗ್ರಹಿಸಿದ್ದಾನೆ. ಜೊತೆಗೆ ಅದನ್ನು ತಮ್ಮ ಹೈ-ಪ್ರೊಫೈಲ್ ಕ್ಲೈಂಟ್‌ಗಳಿಗೆ ಮಾರಾಟ ಮಾಡಿದ್ದ ಎಂದು ಆರೋಪಿಸಲಾಗಿತ್ತು.

ಪ್ರಕರಣದ ಬಗ್ಗೆ ತೀವ್ರ ವಿಚಾರಣೆ ನಡೆಸಿದಾಗ ಶ್ರೀಕೃಷ್ಣ, ransomware ದಾಳಿ, ಬಿಟ್‌ಕಾಯಿನ್ ವಿನಿಮಯಕ್ಕೆ ಹ್ಯಾಕ್ ಮಾಡುವುದು, ಕ್ರಿಪ್ಟೋಕರೆನ್ಸಿ ಲೂಟಿ, ಮನಿ ಲಾಂಡರಿಂಗ್ ಮತ್ತು ಸೈಬರ್ ವಂಚನೆಗಳಂತಹ ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಆಘಾತಕಾರಿ ಅಂಶ ಬಹಿರಂಗಗೊಂಡಿತ್ತು. ಮಾತ್ರವಲ್ಲ, 2019 ರಲ್ಲಿ ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನ ಹ್ಯಾಕಿಂಗ್‌ನಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಇದೆ. ಜುಲೈ 2019 ರಲ್ಲಿ ಹಣಕಾಸು ಸಲಹೆಗಾರ ಎಸ್.ಕೆ. ಶೈಲಜಾ. ಅರ್ನೆಸ್ಟ್ ಮನಿ ಡೆಪಾಸಿಟ್ಸ್ ಮರುಪಾವತಿಯನ್ನು ಪರಿಶೀಲಿಸುವಾಗ, 7.37 ಕೋಟಿ ಅನಧಿಕೃತ ನಿಧಿ ವರ್ಗಾವಣೆ ಆಗಿರೋದು ಪತ್ತೆ ಆಗಿತ್ತು. ಈ ಸಂಬಂಧ ಸಿಐಡಿಗೆ ದೂರು ಸಲ್ಲಿಸಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಬಿಟ್​ಕಾಯಿನ್’ ಹಗರಣವನ್ನೂ ತನಿಖೆ ಮಾಡ್ತೇವೆ -ಡಾ.ಪರಮೇಶ್ವರ್ ಘೋಷಣೆ

https://newsfirstlive.com/wp-content/uploads/2023/06/PARAMESHWAR14062023.jpg

Load More