newsfirstkannada.com

ರಾಮ ಲಲ್ಲಾ ಮೂರ್ತಿ ಕೆತ್ತನೆ ಪೂರ್ಣಗೊಳಿಸಿದ ಮೈಸೂರಿನ ಶಿಲ್ಪಿ; ಅಯೋಧ್ಯೆಗೆ ಕನ್ನಡಿಗನ ಕೊಡುಗೆ ಸ್ಮರಣೀಯ

Share :

Published December 27, 2023 at 5:52am

Update December 27, 2023 at 8:16am

    ಅಯೋಧ್ಯೆ ಶ್ರೀ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ

    ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ದಕ್ಕಿದ ಮೂರ್ತಿ ಕೆತ್ತನೆ ಕಾಯಕ

    ಮೂರರಲ್ಲಿ ಒಂದು ರಾಮ ಲಲ್ಲಾ ಮೂರ್ತಿ ಪ್ರಧಾನಿ ಮೋದಿ ಉದ್ಘಾಟನೆ

ಮೈಸೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ 2024 ಜನವರಿ 22ರಂದು ರಾಮ ಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಮೂರ್ತಿ ಕೆತ್ತನೆ ಕಾಯಕ ಒಲಿದು ಬಂದಿದೆ. ಮೂರರಲ್ಲಿ ಒಂದು ರಾಮ ಲಲ್ಲಾ ಮೂರ್ತಿಯ ಕೆತ್ತನೆಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಪೂರ್ಣಗೊಳಿಸಿದ್ದಾರೆ. ಮೈಸೂರಿನ ಅರುಣ್ ಯೋಗಿರಾಜ್ ಕೈಯಲ್ಲಿ ರಾಮ ಲಲ್ಲಾ ಮೂರ್ತಿ ಮೂಡಿಬಂದಿದೆ.

2024, ಜನವರಿ 22ರಂದು ಇಡೀ ಜಗತ್ತು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುವ ರಾಮ ಲಲ್ಲಾ ಮೂರ್ತಿ ಕಡೆ ತಿರುಗಲಿದೆ. ರಾಮನ ಜನ್ಮಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ಈ ಕಾರ್ಯಕ್ರಮವನ್ನ ಐತಿಹಾಸಿಕಗೊಳಿಸಲು ಪ್ಲಾನ್​​ ರೂಪಿಸಿರುವ ಬಿಜೆಪಿ, 2024ರ ಲೋಕ ಯುದ್ಧಕ್ಕೆ ರಾಮ ಬಾಣ ಪ್ರಯೋಗಕ್ಕೆ ಮುಂದಾಗಿದೆ. ಈ ಮೂಲಕ ಮತ ಕದನದಲ್ಲಿ ರಾಮ ಮಂತ್ರ ಪಠಣ ಆಗಲಿದೆ. ಇದರ ನಡುವೆ ಜನವರಿ 22ರಂದು  ರಾಮ್ ಲಲ್ಲಾ ಮೂರ್ತಿ ಲೋಕಾರ್ಪಣೆಯಾಗಲಿದೆ. ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಕೂಡ ಪ್ರತ್ಯೇಕವಾಗಿ ರಾಮ ಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕು ಕೃಷ್ಣಶಿಲೆಯಲ್ಲಿ ಮೂರ್ತಿ ನಿರ್ಮಾಣ ಕಾರ್ಯ ನಡೆದಿದೆ. ಇನ್ನು ಈ ಪ್ರತಿಮೆಯನ್ನು ಪೂರ್ಣಗೊಳಿಸಲು ಆರು ತಿಂಗಳು ಕಾಲಾವಕಾಶ ತೆಗೆದುಕೊಳ್ಳಲಾಗಿದೆ.

51 ಇಂಚು ಎತ್ತರದ ರಾಮ ಲಲ್ಲಾ ಮೂರ್ತಿ ಇದಾಗಿದೆ. ಇಡೀ ಮೂರ್ತಿಯ ಒಟ್ಟು ಗಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ. ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. ಈ ಮೊದಲು ಕೇದಾರನಾಥ ದೇಗುಲಕ್ಕೆ ಆದಿ ಶಂಕರಾಚಾರ್ಯರ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ್ ಅವರೇ ಕೆತ್ತಿದ್ದರು. ದೆಹಲಿಯ ಇಂಡಿಯಾ ಗೇಟ್ ಬಳಿ (ಕರ್ತವ್ಯ ಪಥ) ಸ್ಥಾಪಿಸಲಾದ ಸುಭಾಶಚಂದ್ರ ಬೋಸ್ ಅವರ ಪ್ರತಿಮೆಯನ್ನೂ ಇವರು ಕೆತ್ತಿದ್ದರು. ಇದನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಎಂಬಿಎ ಪದವೀಧರರಾದ ಅರುಣ್ ಕಾರ್ಪೊರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆಯ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು. 2008ರಿಂದ ಈವರೆಗೂ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರತಿಮೆಗಳನ್ನು ಇವರು ಕೆತ್ತಿರೋದು ವಿಶೇಷವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಮ ಲಲ್ಲಾ ಮೂರ್ತಿ ಕೆತ್ತನೆ ಪೂರ್ಣಗೊಳಿಸಿದ ಮೈಸೂರಿನ ಶಿಲ್ಪಿ; ಅಯೋಧ್ಯೆಗೆ ಕನ್ನಡಿಗನ ಕೊಡುಗೆ ಸ್ಮರಣೀಯ

https://newsfirstlive.com/wp-content/uploads/2023/12/arun-1.jpg

Load More