ಸ್ಯಾಂಡಲ್ವುಡ್ ಯುವರಾಜನಿಗಿಂದು ಹುಟ್ಟುಹಬ್ಬದ ಸಂಭ್ರಮ
ಕುಟುಂಬದವರೊಂದಿಗೆ ಅಯೋಧ್ಯೆಯಲ್ಲಿರುವ ನಿಖಿಲ್ ಕುಮಾರ್
ರಾಮಲಲ್ಲಾ ಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಳ್ಳಲಿರುವ ದೇವೇಗೌಡ ಫ್ಯಾಮಿಲಿ
ಸ್ಯಾಂಡಲ್ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸದ್ಯ ಆಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿರುವ ಯುವರಾಜ. ಕುಟುಂಬದವರೊಂದಿಗೆ ರಾಮಲಲ್ಲಾ ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ಅಯೋಧ್ಯೆಯಲ್ಲೇ ಜನ್ಮ ದಿನವನ್ನ ಆಚರಿಸಿಕೊಂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿಯವರು ತಂದೆ, ಅಜ್ಜ, ಅಜ್ಜಿ ಕಾಲಿಗೆ ನಮಸ್ಕರಿಸುವ ಮೂಲಕ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹುಟ್ಟುಹಬ್ಬದ ವಿಶೇಷ ದಿನದಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ‘‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು ನನ್ನ ಪುಣ್ಯ. ಈ ಸಂತೋಷದ ಗಳಿಗೆಯಲ್ಲಿ ತಂದೆಯವರಾದ ಕುಮಾರಸ್ವಾಮಿ ಹಾಗೂ ತಾತ ದೇವೇಗೌಡ ಮತ್ತು ಅಜ್ಜಿ ಚೆನ್ನಮ್ಮ ಜೊತೆಯಲ್ಲಿದ್ದಿದ್ದು ಸಂಭ್ರಮ ಮತ್ತಷ್ಟು ಹೆಚ್ಚಿಸಿದೆ’’ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚೆನ್ನಮ್ಮ, ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಮಗ ನಿಖಿಲ್ ಕುಮಾರಸ್ವಾಮಿ ನಿನ್ನೆ ಅಯೋಧ್ಯೆಗೆ ಹೋಗಿದ್ದಾರೆ. ವಿಶೇಷ ವಿಮಾನದ ಮೂಲಕ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ದೇವೇಗೌಡರ ಫ್ಯಾಮಿಲಿ ದೈವಭಕ್ತರಾಗಿದ್ದು, ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಇಂದು ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ