ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ ಹೊಸ ಫೋಟೋಸ್ ವೈರಲ್
ಸುಂದರವಾದ ಗುಲಾಬಿ ಹೂಗಳಿಗೆ ಮುತ್ತಿಟ್ಟ ಸ್ಯಾಂಡಲ್ವುಡ್ ನಟಿ
ಸ್ಯಾಂಡಲ್ವುಡ್ ಕ್ವೀನ್ ಫೋಟೋ ನೋಡಿ ಫ್ಯಾನ್ಸ್ ಹೇಳಿದ್ದೇನು?
ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದ ಮಾಜಿ ಸಂಸದೆ ಹಾಗೂ ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ ಮತ್ತೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಮೋಹಕತಾರೆ ರಮ್ಯಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ಬಹಳ ದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ನಟಿ ರಮ್ಯಾ ಗುಲಾಬಿ ಹೂವುಗಳ ಜೊತೆ ಚಂದವಾದ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಗುಲಾಬಿ ಹೂವು ನಾಚಿ ನೀರಾಗುವಂತೆ ಅವುಗಳಿಗೆ ಮುತ್ತಿಟ್ಟು ಖುಷಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ನಟಿ ರಮ್ಯಾ ಬಿಳಿ ಬಣ್ಣದ ಟೀ ಶರ್ಟ್ ಧರಿಸಿಕೊಂಡಿದ್ದಾರೆ. ಈ ಫೋಟೋಗಳ ಜೊತೆಗೆ ತಮ್ಮ ಮುದ್ದಿನ ನಾಯಿಯ ಫೋಟೋ ಶೇರ್ ಮಾಡಿದ್ದಾರೆ.
ಸದ್ಯ ನಟಿ ರಮ್ಯಾ ಡಾಲಿ ಧನಂಜಯ್ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಲವು ವರ್ಷಗಳ ನಂತರ ಮತ್ತೆ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇದರ ಜೊತೆಗೆ ನಟಿ ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ.
ಇನ್ನು, ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು 2 ದಶಕ ಕನ್ನಡ ಚಿತ್ರರಂಗವನ್ನು ಆಳಿದ ನಟಿ. ಈಗಲೂ ತನ್ನ ಜೀವನದ ಸಾಮ್ರಾಜ್ಯಕ್ಕೆ ತಾನೆ ರಾಣಿ, ಲವ್ ಯೂ ರಾಣಿ. ಸುಂದರವಾದ ಹೂವುಗಳ ಗುಂಪಿನೊಂದಿಗೆ ಸುಂದರವಾದ ಹೂವು ಸಾಕ್ಷಿಯಾಗಿದೆ ಎಂದು ಬಗೆ ಬಗೆಯಾಗಿ ಕಮೆಂಟ್ ಮಾಡಿದ್ದಾರೆ.
View this post on Instagram
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ