ಕುಕ್ಕುಜೆಯಲ್ಲಿ ಗೃಹಪ್ರವೇಶ ಸಮಾರಂಭದ ವಿಡಿಯೋ ಮಾಡ್ತಿದ್ರು
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ ವಿಡಿಯೋಗ್ರಾಫರ್
ಕುಸಿದು ಬಿದ್ದ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಸಾವು
ಉಡುಪಿ: ಗೃಹಪ್ರವೇಶ ಸಮಾರಂಭದಲ್ಲಿ ವಿಡಿಯೋಗ್ರಫಿ ಮಾಡುವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಕುಕ್ಕುಜೆ ಎಂಬಲ್ಲಿ ನಡೆದಿದೆ.
ಕಾರ್ಕಳ ತೆಳ್ಳಾರು ನಿವಾಸಿ ದೀಪಕ್ ಶೆಟ್ಟಿ (45) ಮೃತ ದುರ್ದೈವಿ. ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ ಹೊಸ ಮನೆಯೊಂದರ ಗೃಹಪ್ರವೇಶದ ಹಿನ್ನೆಲೆಯಲ್ಲಿ ವಿಡಿಯೋಗ್ರಫಿ ಮಾಡುತ್ತಿದ್ದನು. ಈ ವೇಳೆ ಆತನಿಗೆ ಹೃದಯಾಘಾತವಾಗಿ ನೆಲಕ್ಕೆ ಕುಸಿದು ಬಿದ್ದಿದ್ದನು. ತಕ್ಷಣ ಆತನನ್ನು ಮಣಿಪಾಲನ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆಗ ಮಾರ್ಗಮಧ್ಯಯೇ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತನು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ