newsfirstkannada.com

ಮಂಡ್ಯ ಜೆಡಿಎಸ್‌ಗೆ ಫಿಕ್ಸ್‌.. BJP ಜೊತೆ ಸೀಟು ಹಂಚಿಕೆಗೆ ಮಹತ್ವದ ತೀರ್ಮಾನ; ನ್ಯೂಸ್ ಫಸ್ಟ್ ವರದಿಯೇ ನಿಜವಾಯ್ತು!

Share :

Published February 22, 2024 at 1:58pm

    ಮೂರು ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟು ಕೊಡಲು ನಿರ್ಧಾರ

    ಅಮಿತ್ ಶಾ ದೆಹಲಿ ನಿವಾಸದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಚರ್ಚೆ

    ಬೆಂಗಳೂರು ಗ್ರಾಮಾಂತರ, ತುಮಕೂರು ಜೆಡಿಎಸ್‌ಗೆ ಸಿಗುತ್ತಾ?

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮೈತ್ರಿ ಪಕ್ಷಗಳ ಸೀಟು ಹಂಚಿಕೆಗೆ ಬಗ್ಗೆ ಚರ್ಚೆ ನಡೆದಿದ್ದು, ಸದ್ಯಕ್ಕೆ ಮೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.

ಮೂಲಗಳ ಪ್ರಕಾರ ಬಿಜೆಪಿ ಹೈಕಮಾಂಡ್‌ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ನಿರ್ಧರಿಸಿದ್ದಾರೆ. ಸದ್ಯ ಮೂರು ಕ್ಷೇತ್ರ ಬಿಟ್ಟು ಕೊಡಲು ಮುಂದಾಗಿರುವ ಬಿಜೆಪಿ, ಉಳಿದಂತೆ ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಅಭ್ಯರ್ಥಿಗಳನ್ನ ಆಯ್ಕೆಯ ಸಂದರ್ಭದಲ್ಲಿ ತೀರ್ಮಾನಿಸುವುದಾಗಿ ಹೇಳಿದೆ.

ಇಂದು ಬೆಳಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ನಿವಾಸದಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದರು. ಈ ಸಭೆಯಲ್ಲಿ ಸೀಟು ಹಂಚಿಕೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ರಮ್ಯಾ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್‌.. ಮಂಡ್ಯದಲ್ಲಿ ಶುರುವಾದ ರಾಜಕೀಯ ಅಲ್ಲೇ ಮುಗಿಯುತ್ತಾ?

ಕಳೆದ ಫೆಬ್ರವರಿ 4ರಂದು ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ನ್ಯೂಸ್ ಫಸ್ಟ್ ವರದಿ ಮಾಡಿತ್ತು. ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡಿದೆ ಎಂದು ನ್ಯೂಸ್ ಫಸ್ಟ್ exclusive ವರದಿ ಮಾಡಿತ್ತು. ಇದೀಗ ನ್ಯೂಸ್ ಫಸ್ಟ್ ಮಾಡಿದ ವರದಿ ನಿಜವಾಗಿದ್ದು, ಜೆಡಿಎಸ್‌ ಮಂಡ್ಯ, ಹಾಸನ, ಕೋಲಾರದಲ್ಲಿ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಡ್ಯ ಜೆಡಿಎಸ್‌ಗೆ ಫಿಕ್ಸ್‌.. BJP ಜೊತೆ ಸೀಟು ಹಂಚಿಕೆಗೆ ಮಹತ್ವದ ತೀರ್ಮಾನ; ನ್ಯೂಸ್ ಫಸ್ಟ್ ವರದಿಯೇ ನಿಜವಾಯ್ತು!

https://newsfirstlive.com/wp-content/uploads/2024/01/HDK_AMIT_SHAH_1.jpg

Load More