newsfirstkannada.com

ರಾಜ್ಯಸಭಾ ಚುನಾವಣೆ.. BJP-JDS ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮೇಲೆ FIR ದಾಖಲು; ಕಾರಣವೇನು?

Share :

Published February 22, 2024 at 2:41pm

Update February 22, 2024 at 2:45pm

    ಕಾಂಗ್ರೆಸ್ & ಪಕ್ಷೇತರ ಶಾಸಕರಿಗೆ ಆಮಿಷ, ಬೆದರಿಕೆ ಆರೋಪ

    ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಕೊಟ್ಟ ದೂರು

    ಫೆಬ್ರವರಿ 27ರಂದು ಜಿದ್ದಾಜಿದ್ದಿನ ರಾಜ್ಯಸಭಾ ಚುನಾವಣೆಗೆ ಮತದಾನ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಂತೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. IPC ಸೆಕ್ಷನ್ 171E, 506, 171Fರ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯಸಭಾ ಚುನಾವಣಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರ ವಿರುದ್ಧ ಶಾಸಕರಿಗೆ ಆಮಿಷ ನೀಡಿದ ಆರೋಪ ಕೇಳಿ ಬಂದಿದೆ. ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ಈ ಬಗ್ಗೆ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು. ಈ ದೂರಿನ ಮೇಲೆ ವಿಧಾನಸೌಧ ಠಾಣೆ ಪೊಲೀಸರು ಈ FIR ದಾಖಲಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಲು ಹಣದ ಆಮಿಷ ಒಡ್ಡಿ, ಬೆದರಿಕೆ ಹಾಕಲಾಗುತ್ತಿದೆ. ಬಿಜೆಪಿ,ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಕಾಂಗ್ರೆಸ್ & ಪಕ್ಷೇತರ ಶಾಸಕರಿಗೆ ಆಮಿಷ ನೀಡಿದ್ದಾರೆ. ಹರಪನಹಳ್ಳಿ ಪಕ್ಷೇತರ ಶಾಸಕಿ ಎಂ.ಪಿ.ಲತಾ, ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಕಾಂಗ್ರೆಸ್‌ ಶಾಸಕರಿಗೆ ಆಮಿಷ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಶಾಸಕ ರವಿಕುಮಾರ್ ಗಣಿಗ ಅವರು ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ ಜೆಡಿಎಸ್‌ಗೆ ಫಿಕ್ಸ್‌.. BJP ಜೊತೆ ಸೀಟು ಹಂಚಿಕೆಗೆ ಮಹತ್ವದ ತೀರ್ಮಾನ; ನ್ಯೂಸ್ ಫಸ್ಟ್ ವರದಿಯೇ ನಿಜವಾಯ್ತು!

ಪೊಲೀಸರು ದಾಖಲಿಸಿರುವ FIRನಲ್ಲಿ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಮೊದಲನೇ ಆರೋಪಿಯಾಗಿದ್ದಾರೆ. ಎರಡನೇ ಆರೋಪಿಯಾಗಿ ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ, ಮೂರನೇ ಆರೋಪಿ ಡಾ. ಮಹಂತೇಶ್ ಹಾಗೂ ನಾಲ್ಕನೇ ಆರೋಪಿಯಾಗಿ ಹರಿಹರದ ಮಾಜಿ ಶಾಸಕ ಶಿವಶಂಕರ್ ಅವರ ಹೆಸರನ್ನು ಉಲ್ಲೇಖ ಮಾಡಲಾಗಿದೆ.

ಇದೇ ಫೆಬ್ರವರಿ 27ರಂದು ಜಿದ್ದಾಜಿದ್ದಿನ ರಾಜ್ಯಸಭಾ ಚುನಾವಣೆ ನಡೆಯುತ್ತಿದೆ. ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗುವ 4 ಸದಸ್ಯ ಸ್ಥಾನಕ್ಕೆ ಐವರು ನಾಮಪತ್ರ ಸಲ್ಲಿಸಿ ಸ್ಪರ್ಧೆಯಲ್ಲಿದ್ದಾರೆ. ಕುಪೇಂದ್ರ ರೆಡ್ಡಿ ಅವರ ಗೆಲುವು ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಕ್ಕೂ ಮಹತ್ವದ್ದಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯಸಭಾ ಚುನಾವಣೆ.. BJP-JDS ಅಭ್ಯರ್ಥಿ ಕುಪೇಂದ್ರ ರೆಡ್ಡಿ ಮೇಲೆ FIR ದಾಖಲು; ಕಾರಣವೇನು?

https://newsfirstlive.com/wp-content/uploads/2024/02/KUPENDRA-REDDY.jpg

Load More