ನಟ ಶೈನ್ ಶೆಟ್ಟಿಗೆ ಕರಿಮಣಿ ಮಾಲೀಕ ನೀನಲ್ಲ ಎಂದ ನೆಟ್ಟಿಗರು
ದೀಪಕ್ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಿಣಿ
ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯ್ತು ಫೋಟೋಸ್
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 7 ಹಾಗೂ 9ರ ಸ್ಪರ್ಧಿಯಾಗಿದ್ದ ದೀಪಿಕಾ ದಾಸ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಕುಟುಂಬಸ್ಥರನ್ನು ಹೊರತು ಪಡಿಸಿ ಯಾರಿಗೂ ಹೇಳದೇ ನಟಿ ದೀಪಿಕಾ ದಾಸ್ ಮದುವೆಯಾಗಿದ್ದಾರೆ.
ಇದನ್ನು ಓದಿ: ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ಬಾಸ್ ಸ್ಪರ್ಧಿ ದೀಪಿಕಾ ದಾಸ್; ಹುಡುಗ ಯಾರು ಗೊತ್ತಾ?
ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮದುವೆ ಫೋಟೋಗಳನ್ನು ಶೇರ್ ಮಾಡಿಕೊಂಡು ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ನಟಿ ದೀಪಿಕಾ ದಾಸ್ ಅವರು ಸದ್ದಿಲ್ಲದೆ ಮದುವೆ ಆಗುತ್ತಾರೆ ಎಂದು ಅಭಿಮಾನಿಗಳಲ್ಲೂ ಊಹಿಸಿರಲಿಲ್ಲ. ಈ ವಿಚಾರದ ಬಗ್ಗೆ ತಿಳಿಯುತ್ತಿದ್ದಂತೆ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಆದರೆ ಫೋಟೋಸ್ ಶೇರ್ ಮಾಡಿಕೊಂಡ ನಟಿ ದೀಪಿಕಾ ದಾಸ್ ಯಾರೊಬ್ಬರು ಪ್ರತಿಕ್ರಿಯೆ ನೀಡಬಾರದೆಂದು ಕಮೆಂಟ್ ಆಯ್ಕೆಯನ್ನೇ ಆಫ್ ಮಾಡಿದ್ದಾರೆ.
ಈಗ ಮತ್ತೊಂದು ಫೋಟೋವನ್ನು ನಟಿ ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋದಲ್ಲಿ ಮದುವೆ ದಿನಾಂಕ, ಹುಡುಗನ ಹೆಸರನ್ನು ರಿವೀಲ್ ಮಾಡಿದ್ದಾರೆ. ಇದರ ಜೊತೆಗೆ ದೀಪಿಕಾ ದಾಸ್ ಹಳದಿ ಕಾರ್ಯಕ್ರಮದಲ್ಲಿ ಭಾಗಿಯಾಗಿರೋ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.
ಇದನ್ನು ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ರಾಜ್ಯ ಸರ್ಕಾರದ ಅತಿ ದೊಡ್ಡ ಫೇಲ್ಯೂರ್- ಕೆ. ಎಸ್ ಈಶ್ವರಪ್ಪ
ದೀಪಿಕಾ ದಾಸ್ ಮದುವೆ ನಡೆದಿದ್ದು ಗೋವಾದಲ್ಲಿ. ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ದೀಪಕ್ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಆ ಫೋಟೋಗಳನ್ನು ಟ್ರೋಲ್ ಪೇಜ್ ಶೇರ್ ಮಾಡಿಕೊಂಡು ದೀಪಿಕಾ ದಾಸ್ ನಡೆಗೆ ಬೇಸರ ಹೊರ ಹಾಕುತ್ತಿದ್ದಾರೆ. ಜೊತೆಗೆ ನಟ ಬಿಗ್ಬಾಸ್ ಸ್ಪರ್ಧಿಯಾಗಿರೋ ಶೈನ್ ಶೆಟ್ಟಿ ಫೋಟೋವನ್ನು ಟ್ಯಾಗ್ ಮಾಡಿ ಕರಿಮಣಿ ಮಾಲೀಕ ನೀನಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ನಟಿ ದೀಪಿಕಾ ದಾಸ್ ಕೃಷ್ಣ ರುಕ್ಮಿಣಿ, ನಾಗಿಣಿ, ಇತ್ತೀಚಿಗೆ ಅಂತರಪಟ ಧಾರಾವಾಹಿಯಲ್ಲಿ ಗೆಸ್ಟ್ ರೋಲ್ನಲ್ಲಿ ನಟಿಸಿದ್ದಾರೆ. ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದ ನಟಿ ದೀಪಿಕಾ ದಾಸ್ ಸೋಶಿಯಲ್ ಮಿಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಸದ್ಯ ಮದುವೆ ಬಗ್ಗೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ