2024ರ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿ
ಮಂಡ್ಯದಿಂದ ಮಾಜಿ ಸಿಎಂ ಕುಮಾರಸ್ವಾಮಿ ಕಣಕ್ಕೆ!
ಜೆಡಿಎಸ್ ಕಾರ್ಯಕರ್ತರಿಂದ ಹೆಚ್ಡಿಕೆ ಸ್ಪರ್ಧೆಗೆ ವಿರೋಧ
ರಾಮನಗರ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿವೆ. ಜೆಡಿಎಸ್ಗೆ ಬಿಜೆಪಿ ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ ಎಂದು ವರದಿಯಾಗಿದೆ. ಈಗ ಸಂಸದೆ ಸುಮಲತಾ ಅವರನ್ನು ಸೋಲಿಸಲು ಮಂಡ್ಯದಿಂದ ಖುದ್ದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರೇ ಅಖಾಡಕ್ಕಿಳಿಯಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ.
ಹೌದು, ಮಾಜಿ ಸಿಎಂ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದ್ದು, ಚನ್ನಪಟ್ಟಣದ ಜೆಡಿಎಸ್ ಬೆಂಬಲಿಗರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಚನ್ನಪಟ್ಟಣದ ಖಾಸಗಿ ರೆಸಾರ್ಟ್ ಒಂದರಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ.
ಯಾವುದೇ ಕಾರಣಕ್ಕೂ ಕುಮಾರಣ್ಣ ಚನ್ನಪಟ್ಟಣ ಬಿಟ್ಟು ಹೋಗಬಾರದು ಎಂದು ನಿಖಿಲ್ಗೆ ಮುತ್ತಿಗೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ನೀವೇ ಮಂಡ್ಯದಿಂದ ಸ್ಪರ್ಧಿಸಿ ನಾವು ಕ್ಯಾನ್ವಸ್ ಮಾಡಿ ಗೆಲ್ಲಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ವೇಳೆ ಕಾರ್ಯಕರ್ತರ ಮಾತಿಗೆ ನಿಖಿಲ್ ತಲೆದೂಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ