newsfirstkannada.com

×

‘ರಾಮೇಶ್ವರಂ ಕೆಫೆ ಬ್ಲಾಸ್ಟ್​ ಕೇಸಲ್ಲಿ ಬಿಜೆಪಿ ಕೈವಾಡ’- ಬಿಗ್​ ಟ್ವಿಸ್ಟ್​​ ಕೊಟ್ಟ ಸಚಿವ ದಿನೇಶ್‌ ಗುಂಡೂರಾವ್​​!

Share :

Published April 5, 2024 at 9:01pm

    ಕಾಂಗ್ರೆಸ್, ಬಿಜೆಪಿ ಮಧ್ಯೆ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಿಗ್ ಫೈಟ್‌!

    ಬಿಜೆಪಿ ನಾಯಕರು ಈಗ ಉತ್ತರ ನೀಡಬೇಕು ಎಂದ ದಿನೇಶ್ ಗುಂಡೂರಾವ್‌

    ಬಾಂಬರ್‌ಗೆ ಸಹಾಯ ಮಾಡಿದ ಮುಜಾಮಿಲ್ ಷರೀಫ್ ಎಂಬಾತನ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಯಲಾಗಿರುವ ಒಂದು ಸುದ್ದಿ ತೀವ್ರ ಸಂಚಲನ ಸೃಷ್ಟಿಸಿದೆ. ಶಿವಮೊಗ್ಗದ ಬಿಜೆಪಿ ಮುಖಂಡನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ ಎನ್ನಲಾಗಿತ್ತು. ಈ ಬಗ್ಗೆ ಬಿಜೆಪಿ ಮೇಲೆ ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನುವಂತೆ ಮಾತನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು ಎಂದು ದಿನೇಶ್ ಗುಂಡೂರಾವ್‌ ಅವರು ಒತ್ತಾಯಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಸುದ್ದಿಗೆ NIAನಿಂದಲೇ ಸ್ಪಷ್ಟಿಕರಣ ನೀಡಲಾಗಿದೆ. ರಾಷ್ಟ್ರೀಯ ತನಿಖಾ ದಳ ಇಂದು ಮಾಧ್ಯಮ ಪ್ರಕಟಣೆ ಹೊರಡಿಸಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಮುಸಾವೀರ್ ಹಾಗೂ ಇದಕ್ಕೆ ರೂಪುರೇಷೆ ಸಿದ್ದಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮಿಲ್ ಷರೀಫ್ ಎಂಬಾತನನ್ನು ಈಗಾಗಲೇ ಬಂಧನ ಮಾಡಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್‌ಗೆ ಹೊಸ ಟ್ವಿಸ್ಟ್‌.. ಶಿವಮೊಗ್ಗ ನಗರದ ಬಿಜೆಪಿ ನಾಯಕನ ವಿಚಾರಣೆ

ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಣೆ ಮಾಡಲಾಗಿದೆ. NIA ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ಮಾಡುತ್ತಿದೆ. ಈ ತನಿಖೆಯ ಭಾಗವಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳು ಎಲ್ಲರ ವಿಚಾರಣೆ ನಡೆಯುತ್ತಿದೆ. ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆ ಆಗುತ್ತೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸಲು ಮನವಿ ಮಾಡಿಕೊಳ್ಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ರಾಮೇಶ್ವರಂ ಕೆಫೆ ಬ್ಲಾಸ್ಟ್​ ಕೇಸಲ್ಲಿ ಬಿಜೆಪಿ ಕೈವಾಡ’- ಬಿಗ್​ ಟ್ವಿಸ್ಟ್​​ ಕೊಟ್ಟ ಸಚಿವ ದಿನೇಶ್‌ ಗುಂಡೂರಾವ್​​!

https://newsfirstlive.com/wp-content/uploads/2024/04/Dinesh-Gunduroa-Bjp.jpg

Load More