ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಬೆಂಗಳೂರಿಗೆ ಸಾಲು ಸಾಲು ಸೋಲು
ಮುಂಬೈ ಇಂಡಿಯನ್ಸ್ ವಿರುದ್ಧವೂ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಸನ್ರೈಸರ್ಸ್ ವಿರುದ್ಧ ನಡೆಯೋ ಪಂದ್ಯಕ್ಕೆ ಮುನ್ನ ಆರ್ಸಿಬಿಗೆ ಮತ್ತೊಂದು ಆಘಾತ!
ಇತ್ತೀಚೆಗೆ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲು ಕಂಡಿದೆ. ಬ್ಯಾಕ್ ಟು ಬ್ಯಾಕ್ 5 ಪಂದ್ಯ ಸೋತ ಆರ್ಸಿಬಿಗೆ ಮತ್ತೊಂದು ಆಘಾತ ಎದುರಾಗಿದೆ.
ಹೌದು, ಮುಂಬೈ ವಿರುದ್ಧದ ವೇಳೆ ಮ್ಯಾಕ್ಸ್ವೆಲ್ಗೆ ಥಂಬ್ ಇಂಜೂರಿ ಆಗಿದೆ. ಕೈಗೆ ತೀವ್ರವಾದ ಗಾಯಗಳು ಆದ ಕಾರಣ ಮ್ಯಾಕ್ಸ್ವೆಲ್ ಮುಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಏಪ್ರಿಲ್ 15ನೇ ತಾರೀಕು ನಡೆಯಲಿರೋ ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಪಂದ್ಯದಿಂದ ಮ್ಯಾಕ್ಸಿ ಔಟ್ ಆಗಲಿದ್ದಾರೆ ಎಂದು ವರದಿಯಾಗಿದೆ. ನಿಜವಾಗಲೂ ಗಾಯ ಆಗಿದೆಯೋ ಅಥವಾ ಉದ್ದೇಶಪೂರ್ವಕವಾಗಿ ಪಂದ್ಯದಿಂದ ತೆಗೆದು ಹಾಕಲಾಗಿದೆಯೇ ಅನ್ನೋ ಚರ್ಚೆ ನಡೆಯುತ್ತಿದೆ.
ಸತತ 5 ಸೋಲಿನಿಂದ ಕಂಗೆಟ್ಟ ಆರ್ಸಿಬಿ ಹೈದರಾಬಾದ್ ವಿರುದ್ಧ ಪಂದ್ಯಕ್ಕಾಗಿ ತಂಡದಲ್ಲಿ ಭಾರೀ ಬದಲಾವಣೆ ಮಾಡೋ ಸಾಧ್ಯತೆ ಇದೆ. ಕಳೆದ 6 ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿರೋ ಕಾರಣ ಸ್ಟಾರ್ ಆಲ್ರೌಂಡರ್ ಮ್ಯಾಕ್ಸಿ ಅವರನ್ನು ಬೆಂಚ್ ಕಾಯಿಸಲಾಗುತ್ತಿದೆ. ಇವರ ಬದಲಿಗೆ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ವಿಲ್ ಚಾಕ್ಸ್ಗೆ ಅವಕಾಶ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಮ್ಯಾಕ್ಸ್ವೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್. ಇವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿಲ್ಲ. ಹೀಗಾಗಿ ಮ್ಯಾಕ್ಸಿ ಬದಲಿಗೆ ಇಂಗ್ಲೆಂಡ್ ಆಲ್ರೌಂಡರ್ ಆಗಿರುವ ವಿಲ್ ಜ್ಯಾಕ್ಸ್ ಆಯ್ಕೆ ಮಾಡಬಹುದು ಎಂದು ವರದಿಯಾಗಿತ್ತು.
ಇದನ್ನೂ ಓದಿ: ಬಿಸಿಸಿಐ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶ ಹೊರಹಾಕಿದ ಇಶಾನ್ ಕಿಶನ್; ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ