ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತ
ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಯುವಕ ರಾಕೇಶ್
ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರೋ ಘಟನೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯರಸ್ತೆಯಲ್ಲಿ ನಡೆದಿದೆ. ರಾಕೇಶ್ (18) ಮೃತಪಟ್ಟ ಬೈಕ್ ಸವಾರ.
ಇದನ್ನೂ ಓದಿ: ಮಾವಿನ ಕಾಯಿ, ಮಾವಿನ ಹಣ್ಣು ಈ ಎರಡರಲ್ಲಿ ಆರೋಗ್ಯಕ್ಕೆ ಯಾವುದು ಬೆಸ್ಟ್?
ಮೃತ ಯುವಕ ಉತ್ತರ ಭಾರತ ಮೂಲದ ರಾಕೇಶ್. ಈತ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೇಸ್ ಸಂಬಂಧ ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ