ನಿಮ್ಮ ಸ್ಕ್ರೀನ್ ಪ್ರೆಸೆನ್ಸ್ ಇಷ್ಟವಾಯಿತು ಯುವ ರಾಜಕುಮಾರ್ ಎಂದ ಕಿಚ್ಚ ಸುದೀಪ್
ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಯುವ ಸಿನಿಮಾ
ಯುವ ಸಿನಿಮಾ ಕಣ್ತುಂಬಿಕೊಂಡ ಪ್ರೇಕ್ಷಕ ಪ್ರಭುಗಳಿಂದ ಒಳ್ಳೆಯ ರೆಸ್ಪಾನ್ಸ್
ದೊಡ್ಮನೆ ಕುಡಿ ನಟ ಯುವ ರಾಜ್ಕುಮಾರ್ ಅಭಿನಯದ ‘ಯುವ’ ಚಿತ್ರ ಕಳೆದ ಮಾರ್ಚ್ 29ರಂದು ರಾಜ್ಯಾದ್ಯಂತ ಬಿಡುಗಡೆ ಆಗಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬಂದ ‘ಯುವ’ ಚಿತ್ರಕ್ಕೆ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿತ್ತು.
ಇದನ್ನೂ ಓದಿ: ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅಗ್ನಿಸಾಕ್ಷಿ ಖ್ಯಾತಿಯ ಇಶಿತಾ ವರ್ಷ; ಯಾವ ಸೀರಿಯಲ್ ಗೊತ್ತಾ?
ಇದೀಗ ಯುವ ನಟನೆಯ ಚೊಚ್ಚಲ ಸಿನಿಮಾವನ್ನು ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಕಣ್ತುಂಬಿಕೊಂಡಿದ್ದಾರೆ. ಈ ಸಿನಿಮಾವನ್ನು ನೋಡಿದ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡುವ ಮೂಲಕ ಯುವ ರಾಜ್ಕುಮಾರ್ ನಟನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ನಟ ಕಿಚ್ಚ ಸುದೀಪ್ ಮನೆಯಲ್ಲಿ ಯುವರಾಜ್ ಕುಮಾರ್ ಭೇಟಿ ಕೊಟ್ಟಿದ್ದಾರೆ. ಸುದೀಪ್ ಅವರ ಮನೆಗೆ ಸಂತೋಷ್ ಆನಂದ್ ರಾಮ್ ಹಾಗೂ ಯುವ ಭೇಟಿ ಕೊಟ್ಟಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
Loved your screen presence @yuva_rajkumar . I guess dancing skills are inherited.. awsm🥂#Yuva is a well crafted film showcasing all the abilities and the expectations outta yuva,,Well done @SanthoshAnand15, you surely have put in a lot.
— Kichcha Sudeepa (@KicchaSudeep) April 15, 2024
ನಿಮ್ಮ ಸ್ಕ್ರೀನ್ ಪ್ರೆಸೆನ್ಸ್ ಇಷ್ಟವಾಯಿತು ಯುವ ರಾಜಕುಮಾರ್. ನಿಮ್ಮ ಡ್ಯಾನ್ಸ್ ಅನುವಂಶಿಕವಾಗಿ ಬಂದಿವೆ ಅಂತಾ ನಾನು ಭಾವಿಸುತ್ತೇನೆ. ನಿಮ್ಮ ಡ್ಯಾನ್ಸ್ ಅದ್ಭುತ. ಯುವ ಎಲ್ಲಾ ಸಾಮರ್ಥ್ಯಗಳು ಮತ್ತು ನಿರೀಕ್ಷೆಗಳನ್ನು ಮೀರಿ ಈ ಸಿನಿಮಾವನ್ನು ರಚಿಸಲಾಗಿದೆ. ಚೆನ್ನಾಗಿ ಮಾಡಿದ್ದೀರಿ ಸಂತೋಷ್ ಆನಂದ್ ಎಂದು ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ