newsfirstkannada.com

ಹಾಸನದಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌.. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಹೇಳಿದ್ದೇನು?

Share :

Published April 27, 2024 at 11:11pm

    ಪೆನ್‌ ಡ್ರೈವ್‌ಗಳು ಸಾಮಾನ್ಯರ ಕೈಗೆ ಸಿಕ್ಕಿ ಸಮಾಜ ತಲೆ ತಗ್ಗಿಸುವ ಸ್ಥಿತಿ

    ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡ ಆರೋಪ

    ಮೊಬೈಲ್‌ನಲ್ಲಿ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್?

ಬೆಂಗಳೂರು: ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯ ಮಹಿಳಾ ಆಯೋಗ ಸರ್ಕಾರಕ್ಕೆ ಬರೆದಿದ್ದ ಪತ್ರವನ್ನು ಆಧರಿಸಿ ಪ್ರಕರಣಕ್ಕೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯ ಮಹಿಳಾ ಆಯೋಗ ಪತ್ರದಲ್ಲಿ ಏನಿದೆ?
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಕುರಿತು ಮತ್ತು ಸಾವಿರಾರು ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು, ಮೊಬೈಲ್‌ನಲ್ಲಿ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿಕೊಂಡು, ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಸಮೂಹ ಮಾಧ್ಯಮಗಳಲ್ಲಿ ಪ್ರಚಾರವಾಗಿರುತ್ತದೆ.

ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ, ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್‌ ಡ್ರೈವ್‌ಗಳು ಈಗ ಜನ ಸಾಮಾನ್ಯರ ಕೈಗೆ ಸಿಕ್ಕಿ, ಇಡೀ ಸಮಾಜ ತಲೆ ತಗ್ಗಿಸುವ ಸ್ಥಿತಿ ಏರ್ಪಟ್ಟಿದೆ.

ಇದನ್ನೂ ಓದಿ: BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ 

ಮಹಿಳೆಯರ ಬದುಕು ಹಾಗೂ ಘನತೆಯನ್ನು ನಾಶ ಮಾಡುತ್ತಿರುವ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲೂ ಸಹ ಈ ವಿಷಯಕ್ಕೆ ಸಂಬಂಧಿಸಿದಂತೆ, ಹಲವಾರು ಸಂಘಟನೆಗಳಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಗಳು ಸ್ವೀಕೃತಗೊಂಡಿರುತ್ತದೆ.

ಹಾಸನ ಜಿಲ್ಲೆಯಲ್ಲಿ ಪೆನ್‌ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಹಲವು ಮಹಿಳೆಯರನ್ನು ಬಲವಂತದಿಂದ ಲೈಂಗಿಕ ಕ್ರಿಯೆಗೆ ಒತ್ತಾಯಪಡಿಸುವ ಮೂಲಕ ಚಿತ್ರೀಕರಿಸಲಾಗಿದೆ ಎನ್ನಲಾಗುತ್ತಿದೆ. ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಆದೇಶ ನೀಡುವಂತೆ ತಮ್ಮನ್ನು ಕೋರುತ್ತೇನೆ.

ಈ ಮೇಲಿನ ಪತ್ರವನ್ನು ರಾಜ್ಯ ಮಹಿಳಾ ಆಯೋಗದ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರಕ್ಕೆ ಬರೆದಿದ್ದರು. ಈ ಪತ್ರವನ್ನು ಆಧರಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನದಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌.. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಹೇಳಿದ್ದೇನು?

https://newsfirstlive.com/wp-content/uploads/2024/04/Prajwal-Revanna-Video-Case.jpg

Load More