ಪ್ಲೇ-ಆಫ್ ಹಾದಿಯತ್ತ ಚೆನ್ನೈ ಸೂಪರ್ ಕಿಂಗ್ಸ್ ದಿಟ್ಟ ಹೆಜ್ಜೆ
SRH ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಸಿಎಸ್ಕೆ
ಇವತ್ತು ಎರಡು ಬಲಿಷ್ಠ ತಂಡಗಳ ನಡುವೆ ಬಿಗ್ ಫೈಟ್
ನಿನ್ನೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 78 ರನ್ಗಳ ಭರ್ಜರಿ ಗೆಲುವು ಸಾಧಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಋತುರಾಜ್ ಗಾಯಕ್ವಾಡ್ ಮತ್ತು ಡೇರಿಲ್ ಮಿಚೆಲ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸ್ತು. 213 ರನ್ಗಳ ಸವಾಲಿನ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.5 ಓವರ್ಗಳಲ್ಲಿ 134 ರನ್ಗಳಿಗೆ ಸರ್ವಪತನ ಕಂಡು 78 ರನ್ಗಳ ಹೀನಾಯ ಸೋಲು ಅನುಭವಿಸಿತು. ಡೇರಿಲ್ ಮಿಚೆಲ್ ಅವರು ನಿನ್ನೆಯ ದಿನ ಒಟ್ಟು ಐದು ಕ್ಯಾಚ್ಗಳನ್ನು ಹಿಡಿದರು. ಈ ಮೂಲಕ ಕ್ಯಾಚ್ಗಳು ಪಂದ್ಯವನ್ನು ಗೆಲ್ಲಿಸುತ್ತವೆ ಅನ್ನೋದನ್ನು ಪ್ರೋವ್ ಮಾಡಿದ್ದಾರೆ.
ಇದನ್ನೂ ಓದಿ:Breaking: ಬಿಜೆಪಿ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ
ಇವತ್ತು ಯಾವೆಲ್ಲ ಪಂದ್ಯಗಳ ನಡುವೆ ಫೈಟ್..!
ಇಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಸಂಜೆ 7:30 ಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಸೆಣೆಸಾಟ ನಡೆಸಲಿವೆ. ಆಡಿರುವ ಎಂಟು ಪಂದ್ಯಗಳಲ್ಲಿ ಐದನ್ನು ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಹತ್ತು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿ ಐದನೇ ಸ್ಥಾನದಲ್ಲಿದೆ. ಇದೀಗ ಎರಡೂ ತಂಡಗಳು ಗೆಲುವು ಸಾಧಿಸುವ ಸಕಲ ತಯಾರಿಯಲ್ಲಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ