ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್
ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ
ಚುಟುಕು ಸಮರಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಮಾಡಿದ ಬಿಸಿಸಿಐ!
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ಅಳೆದು ತೂಗಿ ತಂಡ ಪ್ರಕಟಿಸಿರೋ ಬಿಸಿಸಿಐ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಟ್ಟಿದೆ.
ತನ್ನನ್ನು ಟೀಮ್ ಇಂಡಿಯಾದಿಂದ ಕೈ ಬಿಟ್ಟಿದ್ದಕ್ಕೆ ಸ್ಟಾರ್ ಕ್ರಿಕೆಟರ್ ಕೆ.ಎಲ್ ರಾಹುಲ್ ಆಕ್ರೋಶ ಹೊರಹಾಕಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಮೌನವೇ ಉತ್ತರ, ಎಲ್ಲಾ ಸಂದರ್ಭಕ್ಕೂ ನಗುವೇ ಸರಿಯಾದ ಪ್ರತಿಕ್ರಿಯೆ ಎಂದು ಖಾರವಾಗಿ ಸ್ಟೇಟಸ್ ಹಾಕಿದ್ದಾರೆ.
ಕೆ.ಎಲ್ ರಾಹುಲ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಟೀಮ್ ಇಂಡಿಯಾದ ಮೊದಲ ಆಯ್ಕೆ ಸಂಜು ಸ್ಯಾಮ್ಸನ್ ಆಗಿದ್ದಾರೆ. ಜತೆಗೆ ಬರೋಬ್ಬರಿ 2 ವರ್ಷಗಳ ಬಳಿಕ ರಿಷಭ್ ಪಂತ್ ಕೂಡ ಕಮ್ಬ್ಯಾಕ್ ಮಾಡಿದ್ದಾರೆ.
ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಸ್ಥಾನ ಖಾಲಿ ಇತ್ತು. ಆ ಸ್ಥಾನದ ಮೇಲೆ ಹಲವಾರು ಪ್ಲೇಯರ್ಸ್ ಕಣ್ಣಿಟ್ಟಿದ್ದರು. ಅದರಲ್ಲಿ ಕೆಎಲ್ ರಾಹುಲ್ ಸಹ ಒಬ್ಬರು ಇದ್ದರು. ವಿಕೆಟ್ ಕೀಪರ್ ಸ್ಥಾನಕ್ಕೆ ಪಂತ್, ಜುರೆಲ್, ಜಿತೇಶ್, ಇಶಾನ್, ಸಂಜು ಹೀಗೆ ಸಾಲು ಸಾಲು ಆಟಗಾರರು ರೇಸ್ನಲ್ಲಿದ್ದರು. ಕೊನೆಗೂ ರಾಹುಲ್ಗೆ ಕೊಕ್ ನೀಡಲಾಗಿದೆ.
ಇದನ್ನೂ ಓದಿ:
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್