ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಲಿದೆ ಸಲಾರ್ ಟೀಸರ್..!
ಕನ್ನಡದ ಪ್ರಶಾಂತ್ ನೀಲ್, ತೆಲುಗಿನ ಪ್ರಭಾಸ್ ಕಾಂಬಿನೇಷನ್
ಈ ಸಿನಿಮಾ ಕೆಜಿಎಫ್ ಸಿನಿಮಾದ ಜಾನರ್ ಆಗಿರುತ್ತಾ, ಇಲ್ವಾ?
ಈ ವರ್ಷದ ಅತಿ ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾ ಹೇಗಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದ್ದು ಇದಕ್ಕೆಲ್ಲಾ ಜುಲೈ 06 ರಂದು ತೆರೆ ಬೀಳಲಿದೆ.
ಸಲಾರ್ ಸಿನಿಮಾವನ್ನು ಸ್ಯಾಂಡಲ್ವುಡ್ನ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಡೈರೆಕ್ಟ್ ಮಾಡುತ್ತಿದ್ದಾರೆ. ಜುಲೈ 06 ರಂದು ಪ್ರಶಾಂತ್ ನೀಲ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಇದೇ ಸಂದರ್ಭದಲ್ಲಿ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡದವರು ಸಲಾರ್ ಸಿನಿಮಾದ ಟೀಸರ್ ರಿಲೀಸ್ ಮಾಡಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 5.12ಕ್ಕೆ 5 ಭಾಷೆಗಳಲ್ಲಿ ಸಲಾರ್ ಸಿನಿಮಾ ಟೀಸರ್ ಭರ್ಜರಿಯಾಗಿ ರಿಲೀಸ್ ಆಗಲಿದೆ.
ಕಳೆದ ವರ್ಷ ಭಾರತೀಯ ಚಿತ್ರರಂಗಕ್ಕೆ ‘ಕೆಜಿಎಫ್- 2’ ಮತ್ತು ‘ಕಾಂತಾರ’ ಸಿನಿಮಾಗಳು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿದಂತಹ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ಸಲಾರ್ ಸಿನಿಮಾ ನಿರ್ಮಾಣ ಮಾಡಿದೆ. ಕಳೆದ 2 ವರ್ಷಗಳಿಂದ ಚಿತ್ರತಂಡದವರು ಈ ಸಿನಿಮಾದ ಶೂಟಿಂಗ್ ಮಾಡುತ್ತಿದ್ದರು ಯಾವುದೇ ಒಂದು ಸಣ್ಣ ಸುಳಿವು ಕೂಡ ಮಾಧ್ಯಮಗಳಿಗೆ ಬಿಟ್ಟುಕೊಟ್ಟಿಲ್ಲ. ಇದರಿಂದಾಗಿಯೇ ಸಲಾರ್ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮತ್ತು ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಸಲಾರ್ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಪ್ರಮೋದ್ ಸೇರಿದಂತೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈ ಚಿತ್ರಕ್ಕೆ ಕನ್ನಡದ ಭುವನ್ ಗೌಡ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ