ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಬೆಂಗಳೂರಿಗೆ ಏಳು ಸೋಲು
ಕಳೆದ ಮೂರು ಪಂದ್ಯಗಳಿಂದ ಕಮ್ಬ್ಯಾಕ್ ಮಾಡಿದ ಬೆಂಗಳೂರು ಟೀಮ್!
ಪ್ರತಿ ಐಪಿಎಲ್ ಪಂದ್ಯದಲ್ಲೂ ಬೆಂಗಳೂರು ತಂಡಕ್ಕೆ ಬಹುದೊಡ್ಡ ಆಘಾತ
ಇತ್ತೀಚೆಗೆ ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಿದೆ. ಭರ್ಜರಿ ಬ್ಯಾಟಿಂಗ್ ಮಾಡಿದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಬೆಂಗಳೂರನ್ನು ಗೆಲ್ಲಿಸಿದ್ದಾರೆ. ಈ ಪಂದ್ಯದಲ್ಲಿ ಆರ್ಸಿಬಿ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೆ ಕೈಕೊಟ್ಟಿದ್ದಾರೆ.
ಕಳಪೆ ಬ್ಯಾಟಿಂಗ್ ಫಾರ್ಮ್ ಮುಂದುವರೆಸಿದ ಆರ್ಸಿಬಿ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಕೇವಲ 4 ರನ್ಗೆ ಔಟ್ ಆಗಿದ್ದಾರೆ. ತಾನು ಆಡಿದ 3 ಬಾಲ್ನಲ್ಲಿ 1 ಬೌಂಡರಿ ಸಿಡಿಸಿದ್ರು. 3ನೇ ಬಾಲ್ನಲ್ಲಿ ಸಿಕ್ಸರ್ ಸಿಡಿಸಲು ಹೋಗಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದ್ರು.
ಸತತ 7 ಸೋಲಿನಿಂದ ಕಂಗೆಟ್ಟ ಬಳಿಕ ಮೂರು ಪಂದ್ಯಗಳಿಂದ ಕಮ್ಬ್ಯಾಕ್ ಮಾಡಿರೋ ಆರ್ಸಿಬಿ ತಂಡದಲ್ಲಿ ಎಷ್ಟು ಬಾರಿ ಅವಕಾಶ ನೀಡಿದ್ರೂ ಮ್ಯಾಕ್ಸ್ವೆಲ್ ಅದೇ ರೀತಿ ಪ್ರದರ್ಶನ ಮುಂದುವರಿಸಿದ್ದಾರೆ. ಕಳೆದ 8 ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿರೋ ಸ್ಟಾರ್ ಆಲ್ರೌಂಡರ್ ಮ್ಯಾಕ್ಸಿ ಕೇವಲ 36 ರನ್ ಗಳಿಸಿದ್ದಾರೆ. ಮ್ಯಾಕ್ಸ್ವೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್. ಇವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿಲ್ಲ ಎಂಬುದು ಎಲ್ಲರ ಆಕ್ರೋಶ.
ಇದನ್ನೂ ಓದಿ: 6,6,6,6,6,6,6,6,6,6,6,6,6,6,6,6,6,6,6,6,6,6,6,6; ಭರ್ಜರಿ ಬ್ಯಾಟಿಂಗ್ ಮೂಲಕ ಖಡಕ್ ಉತ್ತರ ಕೊಟ್ಟ ಕೊಹ್ಲಿ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್