ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಬೆಂಗಳೂರಿಗೆ ಭಾರೀ ಹಿನ್ನಡೆ
ಕಳೆದ ಮೂರು ಪಂದ್ಯಗಳಿಂದ ಭರ್ಜರಿ ಕಮ್ಬ್ಯಾಕ್ ಮಾಡಿದ್ದ ಬೆಂಗಳೂರು
ಪಂಜಾಬ್ ವಿರುದ್ಧ ಪಂದ್ಯಕ್ಕೂ ಮುನ್ನವೇ ಆರ್ಸಿಬಿ ಟೀಮ್ಗೆ ಬಿಗ್ ಶಾಕ್!
ಇತ್ತೀಚೆಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಮ್ನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದು ಬೀಗಿದೆ. ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯ ಗೆದ್ದು ಆರ್ಸಿಬಿ ಪ್ಲೇ ಆಫ್ ರೇಸ್ನಲ್ಲಿದೆ. ಪ್ಲೇ ಆಫ್ಗಾಗಿ ಇಂದು ಧರ್ಮಶಾಲಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯಲಿರೋ ಪಂದ್ಯ ಗೆಲ್ಲಲೇಬೇಕಿದೆ.
ಇನ್ನು, ಆರ್ಸಿಬಿ ತಾನು ಆಡಿರೋ 11 ಪಂದ್ಯಗಳಲ್ಲಿ 4ರಲ್ಲಿ ಗೆದ್ದು 7 ಮ್ಯಾಚ್ ಸೋತಿದೆ. ಅಷ್ಟೇ ಅಲ್ಲ ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಸ್ಥಾನದಲ್ಲಿದೆ. ಇದರ ಮಧ್ಯೆ ಆರ್ಸಿಬಿಗೆ ಬಿಗ್ ಶಾಕ್ ಕಾದಿದೆ.
ಯೆಸ್, ಗುಜರಾತ್ ವಿರುದ್ಧ ಪಂದ್ಯದ ವೇಳೆ ಮ್ಯಾಕ್ಸ್ವೆಲ್ ಇಂಜೂರಿಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಂಜಾಬ್ ವಿರುದ್ಧ ಪಂದ್ಯಕ್ಕೆ ಮ್ಯಾಕ್ಸಿ ಅಲಭ್ಯರಾಗಲಿದ್ದಾರೆ. ಈಗಾಗಲೇ ಸಾಕಷ್ಟು ಒತ್ತಡಕ್ಕೆ ಒಳಗಾದ ಕಾರಣ ಸರಿಯಾಗಿ ಪ್ರದರ್ಶನ ನೀಡಲು ಆಗುತ್ತಿಲ್ಲ ಎಂದಿದ್ದಾರೆ ಮ್ಯಾಕ್ಸಿ. ಹಾಗಾಗಿ ನನ್ನ ಬದಲಿಗೆ ಯಾರಿಗಾದ್ರೂ ಅವಕಾಶ ಕೊಡಿ ಎಂದು ಫಾಫ್ ಡುಪ್ಲೆಸಿಸ್ ಬಳಿ ಮನವಿ ಮಾಡಿದ್ದೆ ಎಂದಿದ್ದರು. ಈಗ ಮ್ಯಾಕ್ಸಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ವರ್ಕ್ಲೋಡ್ ಜಾಸ್ತಿಯಾದ ಕಾರಣ ಬ್ರೇಕ್ ತೆಗೆದುಕೊಂಡಿದ್ದಾರೆ.
ಸತತ 3 ಪಂದ್ಯ ಗೆದ್ದಿರೋ ಆರ್ಸಿಬಿ ಪಂಜಾಬ್ ವಿರುದ್ಧ ಪಂದ್ಯಕ್ಕಾಗಿ ತಂಡದಲ್ಲಿ ಭಾರೀ ಬದಲಾವಣೆ ಮಾಡೋ ಸಾಧ್ಯತೆ ಇದೆ. ಕಳೆದ 7 ಇನ್ನಿಂಗ್ಸ್ನಲ್ಲೂ ಕಳಪೆ ಪ್ರದರ್ಶನ ನೀಡಿರೋ ಸ್ಟಾರ್ ಆಲ್ರೌಂಡರ್ ಮ್ಯಾಕ್ಸಿ ಈಗ ಟೂರ್ನಿಯಿಂದ ಹೊರಬಿದ್ದಿದ್ದು, ಇವರ ಬದಲಿಗೆ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ವಿಲ್ ಚಾಕ್ಸ್ಗೆ ಅವಕಾಶ ನೀಡಲಿದ್ದಾರೆ. ಮ್ಯಾಕ್ಸ್ವೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್. ಇವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿಲ್ಲ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್