ನಿರಂತರವಾಗಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರು ಪರದಾಟ
ಬೆಳಗಿನ ಜಾವದಿಂದಲೂ ನಿಂತಲ್ಲೇ ನಿಂತಿರುವ ನೂರಾರು ವಾಹನಗಳು
ಒಂದೇ ಟೈಮ್ನಲ್ಲಿ ಎರಡು ಸರ್ಕಾರಿ ಬಸ್ ಕೆಟ್ಟಿದ್ದಕ್ಕೆ ಜನರಿಗೆ ತೊಂದರೆ
ಚಿಕ್ಕಮಗಳೂರು: ಎರಡು ಕೆಎಸ್ಆರ್ಟಿಸಿ ಬಸ್ಗಳು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ಚಾರ್ಮಾಡಿ ಘಾಟ್ನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.
ಚಾರ್ಮಾಡಿ ಘಾಟ್ನ ಅಣ್ಣಪ್ಪ ಸ್ವಾಮಿ ದೇವಾಲಯದ ರಸ್ತೆಯಲ್ಲಿ ಎರಡು ಕೆಎಸ್ಆರ್ಟಿಸಿ ಬಸ್ಗಳು ಕೆಟ್ಟು ನಿಂತಿವೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆಗೆ ಒಳಗಾಗಿ ಮಳೆಯಲ್ಲಿ ಯಾವ ಕಡೆ ಹೋಗಬೇಕು ಎನ್ನುವುದು ಗೊತ್ತಾಗದೆ ಸುಮ್ಮನೆ ಕುಳಿತ್ತಿದ್ದಾರೆ. ಇದು ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿದೆ.
ಇದನ್ನೂ ಓದಿ: ‘ಮೋದಿಗೆ ಯಾರೂ ವೋಟ್ ಹಾಕಬೇಡಿ’.. ಹೀಗೆ ಶಾಲಾ ಮಕ್ಕಳಿಗೆ ಹೇಳಿದ್ದ ಶಿಕ್ಷಕ ಅರೆಸ್ಟ್.. ಏನಿದು ಕೇಸ್?
ನಿರಂತರ ಮಳೆಯಿಂದ ಪ್ರವಾಸಿಗರು ಪ್ರಯಾಣಿಕರು ಪರದಾಡಿದ್ದು ಇಂತಹ ಟ್ರಾಫಿಕ್ನಲ್ಲಿ ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ವೊಂದು ಸಿಲುಕಿಕೊಂಡಿದ್ದು ಒಳಗಿದ್ದ ರೋಗಿ ನೋವಿನಿಂದ ಬಳಲಿದ್ದಾರೆ. ಈ ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್ ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ