ಗಂಭೀರವಾಗಿ ಗಾಯಗೊಂಡವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು
ಎರಡು ವಾಹನಗಳು ಡಿಕ್ಕಿಯಾದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ
ಆಸ್ಪತ್ರೆಗೆ ದಾಖಲು ಮಾಡಿದ ಗಾಯಾಳುಗಳ ಸ್ಥಿತಿ ಚಿಂತಾಜನಕ
ಮಂಡ್ಯ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಮಂಡ್ಯದ ಮದ್ದೂರು ತಾಲೂಕಿನ ಸಾದೊಳಲು ಗ್ರಾಮ ಬಳಿ ನಡೆದಿದೆ.
ಸಾದೊಳಲು ಗ್ರಾಮ ಬಳಿ ಬರುವ ಮದ್ದೂರು-ಮಳವಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರನ್ನು ಚಾಲನೆ ಮಾಡುತ್ತಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ: World Meditation day ಯಾವಾಗ.. ಧ್ಯಾನದಿಂದ ನಮಗೆ ಏನೆಲ್ಲ ಪ್ರಯೋಜನ ಗೊತ್ತಾ?
ಕೆಎಸ್ಆರ್ಟಿಸಿ ಬಸ್ ಮಳವಳ್ಳಿ ಕಡೆಯಿಂದ ಬರುತ್ತಿತ್ತು. ಮದ್ದೂರು ಕಡೆಯಿಂದ ಶಿಫ್ಟ್ ಕಾರು ಹೋಗುವಾಗ ದುರ್ಘಟನೆ ನಡೆದಿದೆ. ಎರಡು ವಾಹನಗಳು ಡಿಕ್ಕಿಯಾದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ