2ನೇ ಬಾರಿಗೆ ಆರೆಂಜ್ ಕ್ಯಾಪ್ ಗೆದ್ದ ಆರ್ಸಿಬಿ ಮಾಜಿ ಕ್ಯಾಪ್ಟನ್ ಕೊಹ್ಲಿ
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಬ್ಯಾಟರ್ ಕೊಹ್ಲಿ ಕಡೆಗಣನೆ
ಭಾರತ ತಂಡದ ಪರ ಹೆಚ್ಚು ರನ್ ಗಳಿಸೋದು ಇವರೇ ಎಂದ ರಾಯುಡು
ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿಯುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರೇಂಜ್ ಕ್ಯಾಪ್ ವಿನ್ನರ್ ವಿರಾಟ್ ಕೊಹ್ಲಿ ವಿರುದ್ಧ ಮಾತಾಡುತ್ತಾ ವಿವಾದ ಸೃಷ್ಟಿಸಿದ್ರು ಅಂಬಾಟಿ ರಾಯುಡು. ಈಗ ಟಿ20 ವಿಶ್ವಕಪ್ ಆಡಲು ಸಜ್ಜಾಗಿರೋ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಕೊಹ್ಲಿ ಅವರನ್ನು ಮತ್ತೆ ಕಡೆಗಣನೆ ಮಾಡುವ ಮೂಲಕ ಅಂಬಾಟಿ ರಾಯುಡು ಅವಮಾನಿಸಿದ್ದಾರೆ.
ಕೊಹ್ಲಿಗೆ ಮತ್ತೆ ಅವಮಾನ!
ಯುಎಸ್ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ನನ್ನ ನೆಚ್ಚಿನ ತಂಡ. ಈ ಟೂರ್ನಿಯಲ್ಲಿ ಭಾರತ ತಂಡದ ಪರ ಸೂರ್ಯಕುಮಾರ್ ಯಾದವ್ ಹೆಚ್ಚು ರನ್ ಗಳಿಸಲಿದ್ದಾರೆ. ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರು ಟಿ20 ವಿಶ್ವಕಪ್ನಲ್ಲಿ ಗಮನ ಸೆಳೆಯುವ ಆಟಗಾರರು, ಕೊಹ್ಲಿ ಅಲ್ಲ ಎಂದಿದ್ದಾರೆ ಅಂಬಾಟಿ ರಾಯುಡು.
ಇನ್ನು, 2024ರ ಐಪಿಎಲ್ ಸೀಸನ್ನಲ್ಲಿ 15 ಪಂದ್ಯಗಳಲ್ಲಿ ಬರೋಬ್ಬರಿ 741 ರನ್ ಗಳಿಸಿರೋ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಆರೆಂಜ್ ಕ್ಯಾಪ್ ಬಹುಮಾನ ಪಡೆದಿದ್ದಾರೆ. ಈ ಸೀಸನ್ನಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಬಾರಿಸಿದ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ.
ಇದನ್ನೂ ಓದಿ: ‘ಸ್ವಲ್ಪ ಸ್ಟಾಂಡರ್ಡ್ ಕಡಿಮೆ ಮಾಡ್ಕೋ’- ಮತ್ತೆ ಕೊಹ್ಲಿ ಬಗ್ಗೆ ನಾಲಿಗೆ ಹರಿಬಿಟ್ಟ ಅಂಬಾಟಿ ರಾಯುಡು!
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ