ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದವರ ಮೇಲೆ ಭಯೋತ್ಪಾದಕರ ದಾಳಿ
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10 ಯಾತ್ರಾರ್ಥಿಗಳು ದಾರುಣ ಸಾವು
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಸ್ಥಳೀಯರಿಂದ ಕಾರ್ಯಚರಣೆ
ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದಕ್ಕೂ ಮೊದಲು ಈ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, 10ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: 3 ದಿನಗಳ ಹಿಂದೆ ನಾಪತ್ತೆಯಾದ ಹೆಂಡತಿ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆ!
ಯಾತ್ರಾರ್ಥಿಗಳ ಬಸ್ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ತೆರಳುತ್ತಿತ್ತು. ಇದೇ ವೇಳೆ ಪೋನಿ ಪ್ರದೇಶದ ತೆರಯತ್ ಗ್ರಾಮದಲ್ಲಿ ಭಯೋತ್ಪಾದಕರು ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಏಕಾಏಕಿ ನಿಯಂತ್ರಣ ತಪ್ಪಿದ ಬಸ್ ಏಕಾಏಕಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಕೂಡಲೇ ಅಲ್ಲಿನ ಸ್ಥಳೀಯರು ಆಂಬ್ಯುಲೆನ್ಸ್ಗೆ ಕರೆ ಮಾಡಿ ಗಾಯಗೊಂಡವರನ್ನು ಸಾಗಿಸಿದ್ದಾರೆ. ಈ ಘಟನೆಯಲ್ಲಿ ಇನ್ನೂ ಅಧಿಕ ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ