newsfirstkannada.com

×

ನಿವೇದಿತಾ ಡಿವೋರ್ಸ್ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ಟ ಚಂದನ್​ ಶೆಟ್ಟಿ; ಏನದು?

Share :

Published June 15, 2024 at 9:42pm

    ಡಿವೋರ್ಸ್ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಶೇರ್ ಮಾಡಿದ ಗಾಯಕ

    ಕರ್ನಾಟಕದ ಕ್ಯೂಟ್​ ಕಪಲ್​ ಆಗಿದ್ದ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ

    ಡಿವೋರ್ಸ್ ಗೊಂದಲ ಬಗೆಹರಿಯುತ್ತಿದ್ದಂತೆ ಗುಡ್‌ನ್ಯೂಸ್‌ ಕೊಟ್ಟ ಚಂದನ್

ಕರ್ನಾಟಕದ ಕ್ಯೂಟ್​ ಕಪಲ್​ ಆಗಿದ್ದ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್​ ವಿಚಾರ ಕೇಳಿ ಅಭಿಮಾನಿಗಳಿಗೆ ಶಾಕ್​ ಆಗಿದ್ದರು. ಇದು ಸುದ್ದಿ ನಿಜಾನಾ ಅಥವಾ ಸುಳ್ಳಾ ಅಂತ ಹಲವರು ತಲೆ ಕೆಡಿಸಿಕೊಂಡಿದ್ದರು. ಈ ಸುದ್ದಿ ಎಲ್ಲಾ ಕಡೆ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳ ಜೊತೆಗೆ ಸ್ಯಾಂಡಲ್​ವುಡ್​ ನಟ ನಟಿಯರು ಫುಲ್​ ಶಾಕ್​ ಆಗಿದ್ದರು. ಇದಾದ ಬಳಿಕ ಡಿವೋರ್ಸ್ ವಿಚಾರದ ಬಗ್ಗೆ​ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ನೀಡಿದ್ದರು. ಖುದ್ದಾಗಿ ಎಲ್ಲರ ಮುಂದೆ ಬಂದು ಗೊಂದಲಗಳಿಗೆ ತೆರೆ ಎಳೆದಿದ್ದರು.

ಇದನ್ನೂ ಓದಿ: ದರ್ಶನ್​ ವಿರುದ್ಧ ಸ್ಟೇಟಸ್​ ಹಾಕಿದ್ದಕ್ಕೆ ನಿನ್ನನ್ನು ಜೀವಂತ ಸುಡುತ್ತೇವೆ ಎಂದ ಅಭಿಮಾನಿ! ಮುಂದೇನಾಯ್ತು ಗೊತ್ತಾ?

ಇದೀಗ ಡಿವೋರ್ಸ್ ಬೆನ್ನಲ್ಲೇ ಕನ್ನಡದ ಗಾಯಕ ಚಂದನ್​ ಶೆಟ್ಟಿ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಹೌದು, ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಸಾಂಗ್ ಇಂದು ಬಿಡುಗಡೆಗೊಂಡಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಸದ್ಯ ಬಿಡುಗಡೆಗೊಂಡಿರೋ ಹಾಡು ಱಪ್​ ಶೈಲಿಯಲ್ಲಿ ಮೂಡಿ ಬಂದಿದೆ.

ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ. ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಿವೇದಿತಾ ಡಿವೋರ್ಸ್ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ಟ ಚಂದನ್​ ಶೆಟ್ಟಿ; ಏನದು?

https://newsfirstlive.com/wp-content/uploads/2024/06/chandan5.jpg

Load More