ಮಹತ್ವದ ರಾಜಕೀಯ ಬೆಳವಣಿಗೆ ಒಂದರಲ್ಲಿ ರಾಹುಲ್ ಗಾಂಧಿ ರಾಜೀನಾಮೆ
ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ರಾಹುಲ್!
ತನಗೆ ಪುನರ್ಜನ್ಮ ಕೊಟ್ಟಿದ್ದ ವಯನಾಡು ಕ್ಷೇತ್ರವನ್ನೇ ಬಿಟ್ಟುಕೊಟ್ಟ ಸಂಸದ
ವಯನಾಡು: ಮಹತ್ವದ ರಾಜಕೀಯ ಬೆಳವಣಿಗೆ ಒಂದರಲ್ಲಿ ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿಯವ್ರು ರಾಜೀನಾಮೆ ನೀಡಲಿದ್ದಾರೆ. 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತನಗೆ ಪುನರ್ಜನ್ಮ ಕೊಟ್ಟಿದ್ದ ವಯನಾಡು ಕ್ಷೇತ್ರವನ್ನೇ ರಾಹುಲ್ ಗಾಂಧಿ ತೊರೆದಿದ್ದಾರೆ.
ಇತ್ತೀಚೆಗೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡು ಹಾಗೂ ರಾಯ್ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಈಗ ರಾಯ್ಬರೇಲಿ ಉಳಿಸಿಕೊಂಡು ವಯನಾಡು ಕ್ಷೇತ್ರವನ್ನು ರಾಹುಲ್ ತ್ಯಜಿಸುತ್ತಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ.
ಸದ್ಯ ಬಲ್ಲ ಮೂಲಗಳ ಪ್ರಕಾರ ಪ್ರಿಯಾಂಕಾ ಗಾಂಧಿಯವ್ರು ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣಾ ರಾಜಕೀಯಕ್ಕೆ ಪಾದರ್ಪಣೆ ಮಾಡಲಿದ್ದಾರೆ. ನಾಳೆಯೇ ಲೋಕಸಭಾ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಹುಲ್ ಗಾಂಧಿ ರಾಜೀನಾಮೆ ಪತ್ರ ನೀಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ