ವಿರಾಟ್ ಕೊಹ್ಲಿ ಬ್ಯಾಟಿಂಗ್ ಭಾರತಕ್ಕೆ ಭಾರೀ ನಿರಾಸೆ ಮೂಡಿಸಿದೆ
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಅಬ್ಬರ
ಭಾರತ- ಆಸ್ಟ್ರೇಲಿಯಾ T20 ಪಂದ್ಯಕ್ಕೆ ಅಡ್ಡಿಯುಂಟು ಮಾಡಿದ್ದ ಮಳೆ
T20 ವಿಶ್ವಕಪ್ ಟೂರ್ನಿಯ ಭಾರತ- ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದೆ. ಹೀಗಾಗಿ 10 ನಿಮಿಷಗಳ ಕಾಲ ಪಂದ್ಯವನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಅಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಫ್ ಸೆಂಚುರಿ ಬಾರಿಸಿದ್ದಾರೆ.
ಇದನ್ನೂ ಓದಿ: ಟೀಮ್ ಇಂಡಿಯಾಕ್ಕೆ ಶಾಕ್ ಕೊಟ್ಟ ಕಿಂಗ್ ಕೊಹ್ಲಿ.. ಮತ್ತೊಮ್ಮೆ ಗೋಲ್ಡನ್ ಡಕೌಟ್
ಗ್ರಾಸ್ ಐಲೆಟ್ನ ಡೇರೆನ್ ಸೆಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದುಕೊಂಡ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಟೀಮ್ ಇಂಡಿಯಾವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಓಪನರ್ ಆಗಿ ಬ್ಯಾಟಿಂಗ್ಗೆ ಕ್ರೀಸ್ಗೆ ಆಗಮಿಸಿದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಪಡೆಯಲಿಲ್ಲ. 2ನೇ ಓವರ್ನಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಗೋಲ್ಡನ್ ಡಕೌಟ್ ಆಗಿದ್ದಾರೆ. ಇನ್ನೊಂದೆಡೆ ಬ್ಯಾಟಿಂಗ್ ಆರ್ಭಟ ಶುರು ಮಾಡಿದ್ದ ರೋಹಿತ್ ಶರ್ಮಾ ಕೇವಲ 19 ಎಸೆತದಲ್ಲಿ 4 ಫೋರ್, 5 ಸಿಕ್ಸರ್ ಅಮೋಘ ಸಿಕ್ಸರ್ ಅರ್ಧ ಶತಕ ಸಿಡಿಸಿದ್ದಾರೆ.
ಇದನ್ನೂ ಓದಿ: ಜಿಮ್ ಟ್ರೈನರ್ಗೆ ಕಂಡೀಷನ್ ಹಾಕಿ ಮದುವೆ.. ಫೇಲ್ ಆಗಿದ್ದಕ್ಕೆ ಗಂಡನಿಗೆ ಡಿವೋರ್ಸ್; ಕಾರಣವೇನು?
ಇದಕ್ಕೂ ಮೊದಲು ಮೈದಾನದಲ್ಲಿ ಮಳೆ ಬಂದಿದ್ದರಿಂದ ಪಂದ್ಯವನ್ನು 10 ನಿಮಿಷಗಳ ಕಾಲ ಸ್ಟಾಪ್ ಮಾಡಲಾಗಿತ್ತು. ಇದೀಗ ಮ್ಯಾಚ್ ಆರಂಭವಾಗಿದ್ದು ಕ್ಯಾಪ್ಟನ್ ರೋಹಿತ್ ಅವರ ಸಿಡಿಲಬ್ಬರದ ಬ್ಯಾಟಿಗ್ ಮುಂದುವರೆದಿದೆ. ಸದ್ಯ ರೋಹಿತ್, ಪಂತ್ ಬ್ಯಾಟಿಂಗ್ ಮಾಡುತ್ತಿದ್ದು 5 ಓವರ್ಗೆ 53 ರನ್ನಿಂದ ಆಡುತ್ತಿದ್ದು ಭಾರತ ಒಂದು ವಿಕೆಟ್ ಕಳೆದುಕೊಂಡಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ