newsfirstkannada.com

×

ರಾಜ್ಯದಲ್ಲಿ ಇಂದಿನಿಂದ 1 ವಾರ ಭರ್ಜರಿ ಮಳೆ.. ಎಲ್ಲೆಲ್ಲಿ? ನೀವು ಓದಲೇಬೇಕಾದ ಸ್ಟೋರಿ ಇದು!

Share :

Published June 28, 2024 at 5:45pm

Update June 28, 2024 at 5:40pm

    ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಆರ್ಭಟ ಜೋರು

    ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ

    ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗೋ ಸಂಭವವಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಭಾರೀ ಮಳೆ.. ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇನ್ನೂ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೆರೆಡು ದಿನ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಆರೆಂಟ್ ಅಲರ್ಟ್ ಘೋಷಣೆ ಮಾಲಾಗಿದೆ.

ಈಗಾಗಲೇ ರಾಜ್ಯದ ಹಲವೆಡೆ ವರುಣ ತನ್ನ ಆರ್ಭಟವನ್ನ ಮುಂದುವರೆಸಿದ್ದಾನೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಂಪರ್ಕ ಕಡಿತವಾಗಿದೆ. ನಿರಂತರ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇದಿಷ್ಟೇ ಅಲ್ಲದೇ ವರುಣ ಸಾವು-ನೋವಿಗೂ ಕಾರಣವಾಗ್ತಿದ್ದಾನೆ. ವರುಣದೇವನ ವಕ್ರದೃಷ್ಟಿ ದಕ್ಷಿಣ ಕನ್ನಡ ಜಿಲ್ಲೆ ಮೇಲೆ ಬಿದ್ದಂತಿದೆ.

ಮನೆಗಳು ಕುಸಿಯುತ್ತಿವೆ. ಮರಗಳು ಧರೆಗುರುಳುತ್ತಿವೆ. ಜೀವವೂ ಬಲಿಯಾಗ್ತಿವೆ. ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರೆಡ್ ಅಲರ್ಟ್​ ಇರೋದ್ರಿಂದ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರದಿಂದಿರಲು ಸೂಚಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಇಂದಿನಿಂದ 1 ವಾರ ಭರ್ಜರಿ ಮಳೆ.. ಎಲ್ಲೆಲ್ಲಿ? ನೀವು ಓದಲೇಬೇಕಾದ ಸ್ಟೋರಿ ಇದು!

https://newsfirstlive.com/wp-content/uploads/2024/06/RAIN-23.jpg

Load More